*ಸಿದ್ದಾಪುರ, ನ. 10: ಸಿದ್ದಾಪುರ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಜನರಲ್ ವರ್ಕರ್ಸ್ ಯೂನಿಯನ್ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹದೇವ್ ನೇತೃತ್ವದಲ್ಲಿ ಮಹಿಳಾ ಕಾರ್ಮಿಕರಿಗಾಗಿ ಹಮ್ಮಿಕೊಂಡ ಸರಕಾರಿ ಸವಲತ್ತು ಹಾಗೂ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು.

ವಕೀಲೆ ಹಾಜೀರಾ ಷರೀಫ್ ಕಾನೂನಾತ್ಮಕ ಸಲಹೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಆರೋಗ್ಯದ ಕುರಿತು ಡಾ. ಶ್ರೀನಿವಾಸ್ ಮಾಹಿತಿ ನೀಡಿದರು.

ಈ ಸಂದರ್ಭ ಸಿಐಟಿಯು ಜಿಲ್ಲಾಧ್ಯಕ್ಷ ಐ.ಆರ್. ದುರ್ಗಾಪ್ರಸಾದ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹೆಚ್.ಬಿ. ರಮೇಶ್, ಕೊಡಗು ಜಿಲ್ಲಾ ಜನರಲ್ ವರ್ಕರ್ಸ್ ಯೂನಿಯನ್ ಪ್ರಧಾನ ಕಾರ್ಯದರ್ಶಿ ಮಹದೇವ್, ಸಿವಿಡೆಫ್ ಇಂಡಿಯಾ ಸಂಘಟನೆಯ ಪಾರ್ವತಿ, ಆಂಟೋನಿ ಸಂಘಟನೆಯ ಕಾರ್ಯಕರ್ತರು ಇದ್ದರು.