ಕುಶಾಲನಗರ, ಜು. 20: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಆಶ್ರಯದಲ್ಲಿ ಪಿರಿಯಾಪಟ್ಟಣ ವಲಯ ಮಟ್ಟದ ಜ್ಞಾನವಿಕಾಸ ಕೇಂದ್ರದ ಮಹಿಳಾ ವಿಚಾರಗೋಷ್ಠಿ ಕಾರ್ಯಕ್ರಮ ಕೊಪ್ಪ ಗ್ರಾಮದ ಸಮುದಾಯ ಭವನದಲ್ಲಿ ನಡೆಯಿತು.ಕೌಟುಂಬಿಕ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ವಿಷಯದ ಕುರಿತಾಗಿ ನಡೆದ ವಿಚಾರಗೋಷ್ಠಿ ಕಾರ್ಯಕ್ರಮವನ್ನು ಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ರೇಖಾ ಉದ್ಘಾಟಿಸಿದರು.ಕೊಪ್ಪದ ಪ್ರಗತಿಬಂಧು ಒಕ್ಕೂಟದ ಅಧ್ಯಕ್ಷೆ ರತ್ನಮ್ಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸಂಪನ್ಮೂಲ ವ್ಯಕ್ತಿಗಳಾಗಿ ಪಿರಿಯಾಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ವಿ. ದಿವ್ಯಾ, ಮಹಿಳಾ ಸಾಂತ್ವನ ಕೇಂದ್ರದ ಆಪ್ತ ಸಮಾಲೋಚಕಿ ಕೆ.ಎನ್. ವಿದ್ಯಾ ಪಾಲ್ಗೊಂಡಿದ್ದರು.ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಪಿರಿಯಾಪಟ್ಟಣ ವಲಯ ಯೋಜನಾಧಿಕಾರಿ ರಮೇಶ, ತಾಲೂಕು ಪಂಚಾಯಿತಿ ಸದಸ್ಯ ಮುತ್ತಣ್ಣ ಇದ್ದರು.