ಸೋಮವಾರಪೇಟೆ, ಅ. 25: “ಎಲ್ಲರೂ ನಮ್ಮ ಗ್ರಾಮದ ರಸ್ತೆ ಸರಿಯಿಲ್ಲ ಎಂದು ನನ್ನ ಬಳಿ ಬರುತ್ತಾರೆ. ಈಗಿನ ಸರ್ಕಾರದಲ್ಲಿ ನಮ್ಮ ಕೈ ಕಟ್ಟಿದೆ. ಬಿಡಿಗಾಸೂ ಅನುದಾನ ನೀಡುತ್ತಿಲ್ಲ. ಒಂದೂವರೆ ವರ್ಷ ಕಾಯಿರಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದ್ದು, ನಾನು ಹಾಗೂ ಕೆ.ಜಿ. ಬೋಪಯ್ಯ ಸೇರಿ ಕೊಡಗಿಗೆ 2 ಸಾವಿರ ಕೋಟಿಗೂ ಅಧಿಕ ಅನುದಾನ ತರುತ್ತೇವೆ” ಎಂದು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.ಇಲ್ಲಿನ ಕೊಡವ ಸಮಾಜದಲ್ಲಿ ಆಯೋಜಿಸಲಾಗಿದ್ದ ಭಾರತೀಯ ಜನತಾ ಪಾರ್ಟಿಯ ಸೋಮವಾರ ಪೇಟೆ ತಾಲೂಕು ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡದೇ ಕಾಲಹರಣ ಮಾಡುತ್ತಿದೆ. ಬೇಡದ ವಿಚಾರಗಳಲ್ಲೇ ಕಾಲ ಕಳೆಯುತ್ತಿದ್ದು, ಅಭಿವೃದ್ಧಿ ಮರೀಚಿಕೆಯಾಗಿದೆ.