ಮಡಿಕೇರಿ, ಜೂ.20 : ಮಡಿಕೇರಿ ತಾಲೂಕು ಯುವ ಒಕ್ಕೂಟದ 2015-16 ನೇ ಸಾಲಿನ 21ನೇ ವಾರ್ಷಿಕ ಮಹಾಸಭೆ ತಾ.24 ರಂದು ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಹೊಟೇಲ್ ಸಮುದ್ರ ಸಭಾಂಗಣದಲ್ಲಿ ಅಂದು ಬೆಳಿಗ್ಗೆ 10 ಗಂಟೆಗೆ ಸಭೆ ನಡೆಯಲಿದೆ ಎಂದು ಕಾರ್ಯದರ್ಶಿ ಟಿ.ಎ.ಕುಮಾರ್ ತಿಳಿಸಿದ್ದಾರೆ.