ಮಡಿಕೇರಿ, ಡಿ. 11: ಜಿಲ್ಲಾ ನೆಹರು ಯುವ ಕೇಂದ್ರದ ವತಿಯಿಂದ 2015-16ನೇ ಸಾಲಿನ ಜಿಲ್ಲಾ ಯುವ ಸಂಘ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಂಘ-ಸಂಸ್ಥೆಗಳ ನೋಂದಣಿ ಅಧಿನಿಯಮ 1960ರ ಪ್ರಕಾರ ನೋಂದಾವಣೆಯಾಗಿ, ನೆಹರೂ ಯುವ ಕೇಂದ್ರದಲ್ಲಿ ಮಾನ್ಯತೆ ಪಡೆದು ಕೊಡಗು ಜಿಲ್ಲೆ ವ್ಯಾಪ್ತಿಯಲ್ಲಿ ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಸಾಂಸ್ಕøತಿಕವಾಗಿ ಕ್ರಿಯಾತ್ಮಕವಾದ ಚಟುವಟಿಕೆ ಹಾಗೂ ಸಾಂಸ್ಕøತಿಕ ಕಾರ್ಯಕ್ರಮಗಳ ಮೂಲಕ ಸಮುದಾಯಿಕ, ಗ್ರಾಮದ ಅಭಿವೃದ್ಧಿಗಾಗಿ ನಿಸ್ವಾರ್ಥತೆಯಿಂದ ಸಲ್ಲಿಸಿರುವ ಗ್ರಾಮೀಣ ಯುವಕ ಸಂಘ, ಯುವತಿ ಮಂಡಳಿಯನ್ನು ಗುರುತಿಸಿ ಜಿಲ್ಲಾ ಮಟ್ಟದಲ್ಲಿ ಅತ್ಯುತ್ತಮ “ಯುವ ಸಂಘ ಪ್ರಶಸ್ತಿ” ನೀಡಲಾಗುವದು. ಪ್ರಶಸ್ತಿಯು ರೂ. 25 ಸಾವಿರ ನಗದು ಹಾಗೂ ಪ್ರಮಾಣ ಪತ್ರವನ್ನು ಒಳಗೊಂಡಿರುತ್ತದೆ. ಜಿಲ್ಲಾ ಮಟ್ಟದಲ್ಲಿ ಆಯ್ಕೆಯಾದ ಯುವ ಸಂಘ, ಮಂಡಳಿ ರಾಜ್ಯ ಮಟ್ಟದ ಸ್ಪರ್ಧೆಗೆ ತಾನೆ ತಾನಾಗಿ ಅರ್ಹತೆ ಪಡೆಯುತ್ತದೆ.
ಯುವ ಸಂಘಗಳು 2015ರ ಏಪ್ರಿಲ್ 1 ರಿಂದ 2016ರ ಮಾರ್ಚ್ 31 ರ ಅವಧಿಯಲ್ಲಿ ಸಮುದಾಯದ ಬೆಳವಣಿಗೆಗೆ ಸಲ್ಲಿಸಿರುವ ಸ್ವಯಂ ಸೇವಾ ಕಾರ್ಯಗಳ ದೃಡೀಕರಣ ಪತ್ರಗಳು, ಭಾವಚಿತ್ರ ಇತ್ಯಾದಿ ವಿವರಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಯನ್ನು ಜಿಲ್ಲಾ ಯುವಜನ ಸಮನ್ವಯಾಧಿಕಾರಿಗಳ ಕಾರ್ಯಾಲಯ, ನೆಹರು ಯುವ ಕೇಂದ್ರ, 2ನೇ ಮಹಡಿ, ಕೊಡಗು ಜಿಲ್ಲಾ ಗೃಹ ನಿರ್ಮಾಣ ಸಹಕಾರ ಸಂಘದ ಕಟ್ಟಡ, ಹೊಸ ಬಡಾವಣೆ, ಮಡಿಕೇರಿ-571201 ಇವರಿಂದ ಕಾರ್ಯಾಲಯದ ಕೆಲಸದ ವೇಳೆಯಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಎಲ್ಲಾ ದಾಖಲೆಗಳೊಂದಿಗೆ ತಾ. 14 ರಂದು ಸಂಜೆ 5 ಗಂಟೆಯೊಳಗೆ ಸಲ್ಲಿಸಲು ಕೋರಿದೆ. ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ:08272-225470 ಅನ್ನು ಸಂಪರ್ಕಿಸಬಹುದು ಎಂದು ನೆಹರು ಯುವ ಕೇಂದ್ರದ ಜಿಲ್ಲಾ ಯುವಜನ ಸಮನ್ವಯಾಧಿಕಾರಿ ತಿಳಿಸಿದ್ದಾರೆ.