ಕೂಡಿಗೆ, ಡಿ. 19: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸೀಗೆಹೊಸೂರು ಗ್ರಾಮದಲ್ಲಿ ತಾಲೂಕು ಪಂಚಾಯಿತಿ ಅನುದಾನದಲ್ಲಿ ಮುಖ್ಯರಸ್ತೆಗೆ ಹೊಂದಿಕೊಂಡಂತೆ ಇರುವ ಉಪ ರಸ್ತೆಗಳ ಕಾಮಗಾರಿಗೆ ಭೂಮಿಪೂಜೆಯನ್ನು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಎಸ್.ಎನ್. ರಾಜಾರಾವ್ ನೆರವೇರಿಸಿ ದರು. ನಂತರ ಮಾತನಾಡಿದ ಅವರು, ಅನುದಾನಗಳ ಸದ್ಬಳಕೆ ಯಿಂದ ಗ್ರಾಮಗಳ ಅಭಿವೃದ್ಧಿ ಸಹಕಾರಿಯಾಗುವದು ಎಂದರು. ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ಮಾತನಾಡಿ, ಈ ಸಾಲಿನ ಅನುದಾನವನ್ನು ಹೆಚ್ಚು ಗ್ರಾಮೀಣ ಪ್ರದೇಶದ ಉಪ ರಸ್ತೆಗಳಿಗೂ ಮತ್ತು ಚರಂಡಿ ಕಾಮಗಾರಿಗೆ ಹೆಚ್ಚು ಬಳಸಿಕೊಳ್ಳಲಾಗುವದು. ಗ್ರಾಮಸ್ಥರ ಸಹಕಾರದೊಂದಿಗೆ ಇನ್ನೂ ಹೆಚ್ಚಿನ ಅನುದಾನದೊಂದಿಗೆ ಗ್ರಾಮದ ಅಭಿವೃದ್ಧಿಯತ್ತ ಗಮನಹರಿಸಲಾಗು ವದು ಎಂದರು.
ತಾಲೂಕು ಪಂಚಾಯಿತಿ ಸದಸ್ಯೆ ಸಬಿತಾ, ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ, ಉಪಾಧ್ಯಕ್ಷ ಗಿರೀಶ್ ಕುಮಾರ್, ಸದಸ್ಯರುಗಳಾದ ಮಂಜಯ್ಯ, ಕೃಷ್ಣ, ಗ್ರಾಮದ ಪ್ರಮುಖರುಗಳಾದ ಅರುಣ್‍ರಾವ್, ಜಗದೀಶ್ ಸೇರಿದಂತೆ ಪ್ರಮುಖರು ಇದ್ದರು.