ನಾಪೆÇೀಕ್ಲು, ನ. 12: ಕಕ್ಕಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯವಕಪಾಡಿ ಗ್ರಾಮದ ಕೇಟೋಳಿರ ಕುಟುಂಬಸ್ಥರ ಐನ್‍ಮನೆಗೆ ತೆರಳುವ ರಸ್ತೆ ಕಾಮಗಾರಿಗೆ ಕಾಂಗ್ರೆಸ್ ಮುಖಂಡ ಬಿ.ಟಿ. ಪ್ರದೀಪ್ ಭೂಮಿ ಪೂಜೆ ನೆರವೇರಿಸಿದರು.ಈ ಸಂದರ್ಭ ಮಾತನಾಡಿದ ಅವರು, ಉಸ್ತುವಾರಿ ಸಚಿವರ ಅನುದಾನದಲ್ಲಿ ರೂ. 12 ಲಕ್ಷ ವೆಚ್ಚದಲ್ಲಿ 65 ಮೀ. ಕಾಂಕ್ರೀಟ್ 375 ಮೀ. ಡಾಮರು ರಸ್ತೆ ನಿರ್ಮಿಸಲಾಗುವದು. ಸರಕಾರ ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವದು ಎಂದರು.

ಈ ಸಂದರ್ಭ ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರ್ತಂಡ ಶೈಲಾ ಕುಟ್ಟಪ್ಪ, ಕಾಂಗ್ರೆಸ್ ಮುಖಂಡ ಕದ್ದಣಿಯಂಡ ಹರೀಶ್ ಬೋಪಣ್ಣ, ಕಕ್ಕಬೆ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಚಮಂಡ ಲವ ಚಿಣ್ಣಪ್ಪ, ಕೇಟೋಳಿರ ನಾಣಯ್ಯ, ಮಾಚಯ್ಯ, ಗಣಪತಿ, ಅಪ್ಪಣ್ಣ, ಕುಟ್ಟಪ್ಪ, ಕಾರ್ಯಪ್ಪ, ಬಡಕಡ ಸುರೇಶ್ ಬೆಳ್ಯಪ್ಪ, ಕದ್ದಣಿಯಂಡ ಬಾಬಿ ಈರಪ್ಪ, ರೈನಾ, ಅರುಣ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಸುಬ್ಬಯ್ಯ, ಮತ್ತಿತರರಿದ್ದರು.