ಚೆಟ್ಟಳ್ಳಿ, ಜು. 30: ಕರ್ನಾಟಕರಾಜ್ಯ ಸಹಕಾರ ಮಹಾಮಂಡಳದ ಆಶ್ರಯದಲ್ಲಿ ಕಲಬುರಗಿಯಲ್ಲಿ ನಡೆದ ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಮಡಿಕೇರಿಯ ಕೆ.ಐ.ಸಿ.ಎಂ. ಸಹಕಾರ ತರಬೇತಿ ಸಂಸ್ಥೆಯ ಅಭ್ಯರ್ಥಿ ತೆನ್ನಿರ ಟೀನಾ ಚಂಗಪ್ಪ ಪ್ರಥಮ ಬಹುಮಾನ ಪಡೆದಿದ್ದಾರೆ.
ಸ್ವಚ್ಛ ಭಾರತ ಅಭಿಯಾನದ ಯಶಸ್ಸು ಸಹಕಾರ ಕ್ಷೇತ್ರದಿಂದ ಮಾತ್ರ ಸಾಧ್ಯಎಂಬ ವಿಚಾರದ ಬಗ್ಗೆ ತರಬೇತಿ ಸಂಸ್ಥೆಗಳ ಮಟ್ಟದಲ್ಲಿ ಪರವಾಗಿ ಟೀನಾ ಚರ್ಚಾ ಸ್ಪರ್ಧೆಯಲ್ಲಿ ಆಯ್ಕೆಯಾದರೆ, ಹರೀಶ್ಎನ್. ವಿರೋಧವಾಗಿ ಆಯ್ಕೆಯಾಗಿದ್ದರು. ತಾ. 29 ರಂದು ಕಲಬುರಗಿಯಲ್ಲಿ ನಡೆದ ರಾಜ್ಯ ಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯಿಂದ ಟೀನ ಹಾಗೂ ಹರೀಶ್ ಚರ್ಚಾ ಸ್ಪರ್ಧೆಯಲ್ಲಿ ಭಾಗವಹಿಸಿ ತೆನ್ನಿರ ಟೀನಾ ಚಂಗಪ್ಪ ಪ್ರಥಮ ಬಹುಮಾನ ಪಡೆದರು. ಈ ಸ್ಪರ್ಧೆಯಲ್ಲಿ ಬೆಂಗಳೂರು, ಮೈಸೂರು, ಮೂಡಬಿದಿರೆ, ಬೆಳಗಾವಿ, ಶಿವಮೊಗ್ಗ, ಧಾರವಾಡ ಜಿಲ್ಲೆಗಳ ಸಹಕಾರ ತರಬೇತಿ ಸಂಸ್ಥೆಯಿಂದ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಪ್ರಶಸ್ತಿ ಪತ್ರದ ಜೊತೆಗೆ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಗೆ ಪಾರಿತೋಷಕ ನೀಡಿ ಗೌರವಿಸಲಾಯಿತು. ಇದು ಈ ಸಂಸ್ಥೆಗೆ ಎರಡನೆಯ ಪಾರಿತೋಷಕವಾಗಿದೆ.