ಕುಶಾಲನಗರ, ಅ. 20: ಬೆಂಗಳೂರಿನಲ್ಲಿ ಆರ್‍ಎಸ್‍ಎಸ್ ಕಾರ್ಯಕರ್ತರ ರುದ್ರೇಶ್ ಹತ್ಯೆ ಖಂಡಿಸಿ ಕುಶಾಲನಗರ ಬಿಜೆಪಿ ಘಟಕದ ಆಶ್ರಯದಲ್ಲಿ ಗುರುವಾರ ಪ್ರತಿಭಟನೆ ನಡೆಯಿತು.

ಕುಶಾಲನಗರ ಬಿಜೆಪಿ ಘಟಕದ ಅಧ್ಯಕ್ಷ ಕೆ.ಜಿ.ಮನು ನೇತೃತ್ವದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟಿಸಿದ ಕಾರ್ಯಕರ್ತರು ರಾಜ್ಯ ಸರಕಾರದ ಆಡಳಿತ ವೈಫಲ್ಯ ವಿರೋಧಿಸಿ ಘೋಷಣೆ ಕೂಗಿದರು.

ರುದ್ರೇಶ್ ಹತ್ಯೆ ಪ್ರಕರಣದ ಬಗ್ಗೆ ಉನ್ನತ ತನಿಖೆ ನಡೆಸಿ ಹಂತಕರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿದರು. ರಾಜ್ಯದಲ್ಲಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಹತ್ಯೆ ಮೇಲಿಂದ ಮೇಲೆ ನಡೆಯುತ್ತಿದ್ದರೂ ರಾಜ್ಯ ಸರಕಾರ ಕೈಕಟ್ಟಿ ಕುಳಿತಿದೆ. ಕೂಡಲೆ ಹಂತರಕ ರನ್ನು ಬಂಧಿಸದಿದ್ದಲ್ಲಿ ರಾಜ್ಯಾದÀ್ಯಂತ ಉಗ್ರ ಪ್ರತಿಭಟನೆ ಕೈಗೊಳ್ಳಲಾಗುವದು ಎಂದು ನಗರ ಘಟಕದ ಪ್ರಧಾನ ಕಾರ್ಯದರ್ಶಿ ಹೆಚ್.ಡಿ.ಶಿವಾಜಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಸೋಮವಾರಪೇಟೆ ತಾಲೂಕು ಬಿಜೆಪಿ ಘಟಕದ ಅಧ್ಯಕ್ಷ ಎಂ.ಎನ್. ಕುಮಾರಪ್ಪ, ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎನ್.ದೇವರಾಜ್, ಯುವ ಮೋರ್ಚಾ ನಗರಾದ್ಯಕ್ಷ ಡಿ.ಕೆ. ಚಂದ್ರಶೇಖರ್, ಪ್ರಧಾನ ಕಾರ್ಯದರ್ಶಿ ನಿಡ್ಯಮಲೆ ದಿನೇಶ್, ಪ್ರಮುಖರಾದ ವಿ.ಡಿ.ಪುಂಡರೀಕಾಕ್ಷ, ಸತ್ಯನಾರಾಯಣ, ಶಿವರಾಜ್, ಕಿಶೋರ್ ಮತ್ತಿತರರು ಇದ್ದರು.