ಕೂಡಿಗೆ, ಜು. 21: ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೇಷ್ಮೆ ಇಲಾಖೆಯ ಆವರಣದಲ್ಲಿ ಇದೀಗ ನೂತನ ಕಟ್ಟಡದಲ್ಲಿ ಪ್ರಾರಂಭಗೊಂಡಿರುವ ಮೊರಾರ್ಜಿ ಆಂಗ್ಲ ಮಾಧ್ಯಮ ವಸತಿ ಶಾಲೆಗೆ ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಚಾರುಲತಾ ಸೋಮಲ್ ಇತ್ತೀಚೆಗೆ ಭೇಟಿ ನೀಡಿ ಶಾಲಾ ಮುಖ್ಯೋಪಾಧ್ಯಾಯರಿಂದ ಮಾಹಿತಿ ಪಡೆದರು. ಅಲ್ಲದೆ, ಸಮೀಪದಲ್ಲಿರುವ ಹಾರಂಗಿ ನದಿಯ ಭಾಗದಲ್ಲಿ ತಡೆಗೋಡೆ ನಿರ್ಮಾಣವಾಗದಿರುವ ಬಗ್ಗೆ ವಿಷಯ ತಿಳಿದು ಈ ಸಾಲಿನಲ್ಲಿ ನೂತನ ಮಾದರಿಯ ತಡೆಗೋಡೆಯನ್ನು ನಿರ್ಮಿಸಲು ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದರು. ಈ ಸಂದರ್ಭ ಶಾಲಾ ಮುಖ್ಯೋಪಾಧ್ಯಾಯ ಪ್ರಕಾಶ್ ಸೇರಿದಂತೆ ಸಹಶಿಕ್ಷಕರು, ಸಿಬ್ಬಂದಿ ಹಾಜರಿದ್ದರು.