ಮಡಿಕೇರಿ, ಡಿ. 10: ಕುಂಬಳದಾಳುವಿನ ನವಚೇತನ ಯುವಕ ಸಂಘ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ 17ನೇ ವರ್ಷದ ಮುಕ್ತ ವಾಲಿಬಾಲ್ ಮತ್ತು ಥ್ರೋಬಾಲ್ ಪಂದ್ಯಾವಳಿಗಳು ತಾ. 25 ರಂದು ಕುಂಬಳದಾಳು ಶಾಲಾ ಮೈದಾನದಲ್ಲಿ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಯುವಕ ಸಂಘದ ನಿರ್ದೇಶಕ ಕೆ.ಪಿ. ದಿನೇಶ್ ಪಂದ್ಯಾವಳಿ ಕುರಿತು ಮಾಹಿತಿ ನೀಡಿದರು. ನೆಹರೂ ಯುವ ಕೇಂದ್ರ, ತಾಲೂಕು ಯುವ ಒಕ್ಕೂಟ, ಕನ್ನಿಕಾ ಯುವತಿ ಮಂಡಳಿ, ಸ್ತ್ರೀ ಶಕ್ತಿ ಮತ್ತು ಸ್ವಸಹಾಯ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಕುಂಬಳದಾಳು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಮೈದಾನದಲ್ಲಿ ತಾ. 25 ರಂದು ಬೆಳಿಗ್ಗೆ 9 ಗಂಟೆಯಿಂದ ಪಂದ್ಯಾವಳಿ ಆರಂಭಗೊಳ್ಳಲಿದೆ. ಕಾಫಿ ಬೆಳೆÉಗಾರ ಕರ್ಣಯ್ಯನ ಬಿ. ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ವಾಲಿಬಾಲ್ ಪಂದ್ಯಾವಳಿಯನ್ನು ಕಾಫಿ ಬೆಳೆಗಾರ ನೆರವಂಡ ಕಮಲ ಮತ್ತು ಕುಟುಂಬಸ್ಥರು ಉದ್ಘಾಟಿಸ ಲಿದ್ದಾರೆಂದರು.

ಥ್ರೋಬಾಲ್ ಪಂದ್ಯಾವಳಿಯನ್ನು ಕಾಫಿ ಬೆಳೆಗಾರ ಬೊಬ್ಬಿರ ಗಿರೀಶ್ ಮತ್ತು ಕುಟುಂಬಸ್ಥರು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಹೊದ್ದೂರು ಗ್ರಾಮ ಪಂಚಾಯ್ತಿ ಅಧ್ಯಕ್ಷ ಕುಲ್ಲಚನ ಪಿ. ದಿನೇಶ್, ಕುಂಬಳದಾಳು ಗ್ರಾಮ ಪಂಚಾಯಿತಿ ಸದಸ್ಯ ಪಿ.ಎ. ನಾರಾಯಣ, ಕಾಫಿ ಬೆಳೆಗಾರ ತೆಕ್ಕಡೆ ಮೋಹನ್ ಪಾಲ್ಗೊಳ್ಳಲಿದ್ದಾರೆ.

ಸಂಜೆ ನಡೆಯುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯ್ತಿ ಅಧ್ಯಕೆÀ್ಷ ತೆಕ್ಕಡೆ ಶೋಭಾ ಮೋಹನ್ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಸದಸೆÀ್ಯ ವೀಣಾ ಅಚ್ಚಯ್ಯ, ಜಿ.ಪಂ. ಸದಸ್ಯ ಮುರಳಿ ಕರುಂಬಮ್ಮಯ್ಯ, ಬಿಜೆಪಿ ಜಿಲ್ಲಾಧ್ಯಕ್ಷ ಮನು ಮುತ್ತಪ್ಪ, ಕಾಫಿ ಬೆಳೆಗಾರ ಸಾಬು ತಿಮ್ಮಯ್ಯ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ಜಯಲಕ್ಷ್ಮೀ ಬಾಯಿ, ತಾಲೂಕು ಯುವ ಒಕ್ಕೂಟದ ಅಧ್ಯಕ್ಷ ನವೀನ್ ದೇರಳ, ಗ್ರಾಪಂ ಸದಸ್ಯ ಹೆಚ್.ಎ. ಹಂಸ ಹಾಗೂ ಬೆಳೆಗಾರ ದಂಬೆಕೋಡಿ ಸುಬ್ರಮಣಿ ಪಾಲ್ಗೊಳ್ಳಲಿದ್ದಾರೆ.

ದಾನಿಗಳ ಸಹಕಾರದಿಂದ ಪಂದ್ಯಾವಳಿಯನ್ನು ನಡೆಸಲಾಗುತ್ತಿದೆ ಯೆಂದು ತಿಳಿಸಿದ ಕೆ.ಪಿ. ದಿನೇಶ್, ಪಂದ್ಯಾವಳಿಯಲ್ಲಿ ಪಾಲ್ಗೊಳ್ಳುವವರು ತಾ. 20 ರೊಳಗೆ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ತಿಳಿಸಿದರು. ಹೆಚ್ಚಿನ ವಿವರಗಳಿಗೆ 8861411442, 9880994980, 9481067656 ಸಂಪರ್ಕಿಸ ಬಹುದಾಗಿದೆ.

ಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಭೀಮಾ ರಾಜ್, ಗೌರವ ಕಾರ್ಯದರ್ಶಿ ರಾಜೇಶ್, ನೆರವಂಡ ಬೆಳ್ಯಪ್ಪ ಹಾಗೂ ಎಂ.ಬಿ. ಸುಬ್ಬಯ್ಯ ಉಪಸ್ಥಿತರಿದ್ದರು.