ಮಡಿಕೇರಿ, ಜು. 21: ವಿದ್ಯಾರ್ಥಿ ಜೀವನ ಅತ್ಯಂತ ಮೌಲ್ಯವುಳ್ಳ ದಾಗಿದ್ದು, ಇತ್ತೀಚಿನ ದಿನಗಳಲ್ಲಿ ಬಹಳಷ್ಟು ವಿದ್ಯಾರ್ಥಿ ಗಳು ಮೊಬೈಲ್, ವಾಟ್ಸ್‍ಆ್ಯಪ್, ಫೇಸ್‍ಬುಕ್ ಮೊದಲಾದ ಚಟಗಳಿಗೆ ದಾಸರಾಗುತ್ತಿರುವದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಸುಂಟಿಕೊಪ್ಪ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೂಪ್ ಮಾದಪ್ಪ ಅಭಿಪ್ರಾಯಪಟ್ಟಿದ್ದಾರೆ.

ಮಾದಾಪುರದ ಡಿ ಚೆನ್ನಮ್ಮ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

ದುಶ್ಚಟ ಸಂಬಂಧ ಹಲವಾರು ಅಪರಾಧ ಪ್ರಕರಣಗಳು ಪೊಲೀಸ್ ಠಾಣೆಯಲ್ಲಿ ದಾಖಲಾಗುತ್ತಿರುವದು ಬೇಸರದ ವಿಚಾರ.

ಬಂಗಾರದಂತಹ ವಿದ್ಯಾರ್ಥಿ ಜೀವನವನ್ನು ಹಾಳು ಮಾಡಿ ಕೊಳ್ಳದೆ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳ ಬೇಕೆಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

ಅಧ್ಯಕ್ಷತೆಯನ್ನು ಪ್ರಬಾರ ಪ್ರಾಂಶುಪಾಲ ಸಿ.ಜಿ. ಮಾದಪ್ಪ ವಹಿಸಿದ್ದರು.

ಕಾರ್ಯದರ್ಶಿ ಎಂ.ಬಿ. ಬೋಪಣ್ಣ, ಪ್ರಾಧ್ಯಾಪಕ ಎಲ್.ಪಿ. ಪಾಲಾಕ್ಷ, ವಿದ್ಯಾರ್ಥಿ ಸಂಘದ ಉಪಾಧ್ಯಕ್ಷೆ ಬಿ.ಎಂ. ಪ್ರಮೀಳಾ ಉಪಸ್ಥಿತರಿದ್ದರು.