ಮಡಿಕೇರಿ, ಜ. 7: ಶಿಸ್ತಿನ ಸಿಪಾಯಿ ಫೀ.ಮಾ. ಕೆ.ಎಂ. ಕಾರ್ಯಪ್ಪ ಅವರು ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವ್ಯಾಸಂಗ ಮಾಡಿರುವದು ಹೆಮ್ಮೆಯ ವಿಷಯ. ಅವರಂತೆ ಎಲ್ಲಾ ವಿದ್ಯಾರ್ಥಿಗಳು ಶಿಸ್ತನ್ನು ಅಳವಡಿಸಿಕೊಳ್ಳಬೇಕು ಎಂದು ಪೊನ್ನಂಪೇಟೆಯ ಶ್ರೀ ರಾಮಕೃಷ್ಣ ಶಾರದಾಶ್ರಮದ ಸ್ವಾಮಿ ಬೋಧ ಸ್ವರೂಪನಂದಾಜಿ ಸಲಹೆ ಮಾಡಿದರು. ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ನಡೆದ ಸರ್ಕಾರಿ ಪದವಿಪೂರ್ವ ಕಾಲೇಜಿನ ಕ್ರೀಡಾ ಮತ್ತು ಸಾಂಸ್ಕøತಿಕ ಸಂಘದ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ.ಎಂ. ಬೆಳ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಸನ್ಮಾರ್ಗದಲ್ಲಿ ನಡೆಯಬೇಕು. ಹಾಗಾದಾಗ ಮಾತ್ರ ಉತ್ತಮ ಸಮಾಜ ಕಾಣಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಉಪನ್ಯಾಸಕಿ ಶಾಂತಿ 2015-16 ನೇ ಸಾಲಿನ ವಾರ್ಷಿಕ ವರದಿ ಓದಿದರು, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಧನಂಜಯ, ಸಮಿತಿ ಸದಸ್ಯ ಬಿ.ಎಂ. ಪೂವಪ್ಪ, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಚೈತ್ರ ಇತರರು ಇದ್ದರು. ವಿದ್ಯಾರ್ಥಿನಿ ರಂಜಿತಾ ಮತ್ತು ಸಂಗಡಿಗರು ಪ್ರಾರ್ಥಿಸಿದರು. ಉಪನ್ಯಾಸಕ ನಂದೀಶ್ ನಿರೂಪಿಸಿದರು. ಸಭಾ ಕಾರ್ಯಕ್ರಮಕ್ಕೂ ಮೊದಲು ಕಾಲೇಜಿನಲ್ಲಿ ಏರ್ಪಡಿಸಿದ ವಿಜ್ಞಾನ ವಸ್ತುಪ್ರದರ್ಶನವನ್ನು ಪೊನ್ನಂಪೇಟೆಯ ಶ್ರೀರಾಮಕೃಷ್ಣ ಶಾರದಾಶ್ರಮದ ಸ್ವಾಮಿ ಬೋಧ ಸ್ವರೂಪಾನಂದಾಜಿ ಅವರು ಉದ್ಘಾಟಿಸಿದರು.