ಮೂರ್ನಾಡು: ಮೂರ್ನಾಡು ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಹಾಗೂ ಶಾಲಾ ವಾರ್ಷಿಕೋತ್ಸವ ಸಂಭ್ರಮದಿಂದ ನಡೆಯಿತು.

ಗಣರಾಜ್ಯೋತ್ಸವದ ಅಂಗವಾಗಿ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಸುಕ್ರದೇವೆಗೌಡ ಧ್ವಜಾರೋಹಣಗೈದರು. ಗಣರಾಜ್ಯೋತ್ಸವ ಹಾಗೂ ವಾರ್ಷಿಕೋತ್ಸವ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಪಥÀಸಂಚಲನ, ವಿವಿಧ ಕವಾಯತುಗಳನ್ನು ಪ್ರದರ್ಶಿಸಿದರು.

ಹೆಚ್ಚು ಅಂಕಗಳಿಸಿದ ವಿಧ್ಯಾರ್ಥಿಗಳಿಗೆ ದತ್ತಿ ನಿಧಿ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಎಸ್‍ಡಿಎಂಸಿ ಸದಸ್ಯರಿಗೆ ಹಾಗೂ ಪೋಷಕರಿಗೆ ಬಹುಮಾನ ವಿತರಿಸಲಾಯಿತು.

ಶಾಲಾ ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಎ.ಟಿ. ಸುರೇಶ್ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಕಾಂತೂರು-ಮೂರ್ನಾಡು ಗ್ರಾಮ ಪಂಚಾಯಿತಿ ಸದಸ್ಯೆ ಜಯಂತಿ, ಎಸ್‍ಡಿಎಂಸಿ ಉಪಾಧ್ಯಕ್ಷ ಮನೋಜ್, ಶಾಲಾ ಮುಖ್ಯ ಶಿಕ್ಷಕಿ ಸರೋಜ, ಎಸ್‍ಡಿಎಂಸಿ ಸದಸ್ಯರು ಉಪಸ್ಥಿತರಿದ್ದರು. ಬಳಿಕ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ನೆರದ ಸಭಿಕರ ಗಮನ ಸೆಳೆಯಿತು. ಶಾಲಾ ಶಿಕ್ಷಕಿ ನಂದಿತ ಸ್ವಾಗತಿಸಿ, ರಾಜಮ್ಮ ಕಾರ್ಯಕ್ರಮ ನಿರೂಪಿಸಿ, ಪುಷ್ಪಲತಾ ವಂದಿಸಿದರು.

ವೀರಾಜಪೇಟೆ: ಕರ್ನಾಟಕ ಸಂಘ ಕೊಡಗು ಕೇರಳ ಪ್ರದೇಶವಾದ ಗಡಿನಾಡಿನಲ್ಲಿ ಕನ್ನಡ ಭಾಷೆ, ಸಾಹಿತ್ಯ ಸೇವೆಗೆ ಆದ್ಯತೆ ನೀಡಿ ಅವಿರತವಾಗಿ ಶ್ರಮಿಸಲು ವಿವಿಧ ಯೋಜನೆಗಳನ್ನು ಹಮ್ಮಿಕೊಂಡಿದೆ ಎಂದು ಕರ್ನಾಟಕ ಸಂಘದ ಅಧ್ಯಕ್ಷ ಚಿಲ್ಲವಂಡ ಪಿ. ಕಾವೇರಪ್ಪ ಹೇಳಿದರು.

ಕರ್ನಾಟಕ ಸಂಘದಿಂದ ಇಲ್ಲಿನ ಪುರಭವನದಲ್ಲಿ ಹಮ್ಮಿಕೊಂಡಿದ್ದ 68ನೇ ಗಣರಾಜ್ಯೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕಾರ್ಯಕ್ರಮವನ್ನು ಕೊಡವ ಸಮಾಜದ ಅಧ್ಯಕ್ಷ ವಾಂಚೀರ ನಾಣಯ್ಯ ಉದ್ಘಾಟಿಸಿದರು. ಕೊಡಗು ಕೇರಳದ ಗಡಿ ನಾಡಾದ ವೀರಾಜಪೇಟೆಯಲ್ಲಿ ಕನ್ನಡ ಭಾಷೆ, ಸಾಹಿತ್ಯದ ಬೆಳವಣಿಗೆಗೆ ಕರ್ನಾಟಕ ಸಂಘ ಆಧಾರ ಸ್ತಂಭವಾಗಿ ನಿಂತಿದೆ.

ಇದೇ ಸಂದರ್ಭ ಕೆ.ಎಸ್.ಆರ್.ಪಿ.ಯ ನಿವೃತ್ತ ಹವಾಲ್ದಾರ್ ಹಾಗೂ ಚಿನ್ನದ ಪದಕ ವಿಜೇತ ಪೂಳಂಡ ತಿಮ್ಮಯ್ಯ (ಪಟ್ಟು) ಅವರನ್ನು ಸನ್ಮಾನಿಸಲಾಯಿತು.

ಅತಿಥಿಗಳಾಗಿ ತಾಲೂಕು ಪಂಚಾಯಿತಿ ಸದಸ್ಯ ಮಾಳೇಟಿರ ಪ್ರಶಾಂತ್ ಉತ್ತಪ್ಪ, ಎಂ.ಎಂ. ಕುಟ್ಟಪ್ಪ ಭಾಗವಹಿಸಿದ್ದರು.

ಸಮಾರಂಭದ ನಂತರ ಪ್ರೌಢ ಶಾಲಾ ವಿಭಾಗಕ್ಕೆ ರಸಪ್ರಶ್ನೆ, ಕಾಲೇಜು ಹಾಗೂ ಸಾರ್ವಜನಿಕ ವಿಭಾಗಕ್ಕೆ ಬೊಳಕಾಟ್ ಹಾಗೂ ಉಮ್ಮತಾಟ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.

ಸಮಾರಂಭದಲ್ಲಿ ಸಂಘದ ಚೇನಂಡ ಎಂ. ಸುರೇಶ್ ನಾಣಯ್ಯ ಸ್ವಾಗತಿಸಿ, ಕಾರ್ಯದರ್ಶಿ ಅರುಣ್ ಅಪ್ಪಣ್ಣ ನಿರೂಪಿಸಿ, ಸಹ ಕಾರ್ಯದರ್ಶಿ ಮುಲ್ಲೇಂಗಡ ಸಿ. ಅಶೋಕ್ ವಂದಿಸಿದರು. ಕೋಟೆರ ತಮ್ಮಯ್ಯ ಗಣೇಶ್ ಹಾಗೂ ಇತರ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಶಿರಂಗಾಲ: ಶಿರಂಗಾಲ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ 68ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ಕಾಲೇಜಿನ ಪ್ರಾಂಶುಪಾಲ ಸುರೇಶ್ ಕುಮಾರ್ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕÀ ಸೋಮಯ್ಯ ನೆರವೇರಿಸಿದರು.

ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಉಪನ್ಯಾಸಕ ಹಂಡ್ರಂಗಿ ನಾಗರಾಜ್ ಪಾಲ್ಗೊಂಡಿದ್ದರು. ಶಿಕ್ಷಕ ಲೋಕೇಶ್ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಸುರೇಶ್ ಕುಮಾರ್ ವಹಿಸಿದ್ದರು.

ವೇದಿಕೆಯಲ್ಲಿ ಕಾಲೇಜಿನ ಉಪನ್ಯಾಸಕರು ಹಾಗೂ ಪ್ರೌಢಶಾಲಾ ವಿಭಾಗದ ಶಿಕ್ಷಕ ವೃಂದ ಇದ್ದರು.