ವೀರಾಜಪೇಟೆ, ಆ. 5: ವಿಶೇಷ ಅಗತ್ಯತೆಯುಳ್ಳ ಮಕ್ಕಳು ಉತ್ತಮ ಸಾಧನೆ ಮಾಡುತ್ತಿದ್ದು, ಇವರಿಗೆ ಪೋಷಕರು ತಪ್ಪದೇ ಶಿಕ್ಷಣ ನೀಡಿ ಪ್ರೋತ್ಸಾಹಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಮುಕೋಂಡ ಶಶಿ ಸುಬ್ರಮಣಿ ಹೇಳಿದರು.
ಕೊಡಗು ಜಿಲ್ಲಾ ಪಂಚಾಯತ್, ಸರ್ವ ಶಿಕ್ಷಣ ಅಭಿಯಾನ-ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ವೀರಾಜ ಪೇಟೆ ಸಾರ್ವಜನಿಕ ಆಸ್ಪತ್ರೆಯ ಸಭಾಂಗಣದಲ್ಲಿ ಆಯೋಜಿಸ ಲಾಗಿದ್ದ 2016ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದÀ್ಯಕೀಯ ತಪಾಸಣಾ ಶಿಬಿರ’ದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿದ ಅವರು, ವಿಶೇಷ ಅಗತ್ಯವುಳ್ಳ ಮಕ್ಕಳನ್ನು ಪ್ರೀತಿಯಿಂದ ಕಾಣುವಂತಾಗಬೇಕು ಎಂದರು. ವೀರಾಜಪೇಟೆ ಪಟ್ಟಣದ ರಸ್ತೆ ಬದಿಯಲ್ಲಿ ಕಸ ಬಿಸಾಡದಂತೆ ಮುಖ್ಯ ರಸ್ತೆ ಬದಿಯಲ್ಲಿ ಚಿಕ್ಕ ಕಸದ ತೊಟ್ಟಿಗಳನ್ನು ಇಡುವಂತೆ ಅಲ್ಲೇ ಇದ್ದ ಪ.ಪಂ. ಅಧ್ಯಕ್ಷರಿಗೆ ಹೇಳಿದ ಶಶಿ ಸುಬ್ರಮಣಿ ಅವರು ಸರ್ಕಾರಿ ಅಥವಾ ಖಾಸಗಿ ಶಾಲೆಗಳೆಂದು ಬೇಧಭಾವ ವಿಲ್ಲದೆ ವಿದ್ಯಾರ್ಥಿಗಳು ಸ್ವಚ್ಛತೆಯನ್ನು ಕಾಪಾಡಬೇಕು. ಸರ್ಕಾರಿ ಶಾಲೆಗಳಲ್ಲಿ ವಿದ್ಯಾಭ್ಯಾಸ ಮಾಡಿದಂತವರು ಉನ್ನತ ಹುದ್ದೆಯಲ್ಲಿದ್ದಾರೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಮಾತನಾಡಿ, ವಿಶೇಷ ಅಗತ್ಯತೆವುಳ್ಳ ಮಕ್ಕಳು ಇತರೆ ಮಕ್ಕಳಿಗಿಂತ ಬುದ್ಧಿ ವಂತರು ಧೈರ್ಯ ಮತ್ತು ಛಲದಿಂದ ವಿದ್ಯಾರ್ಥಿಗಳು ಸಾಧನೆ ಮಾಡಬೇಕಾಗಿದೆ ಜಿ.ಪಂ.ಯಿಂದ ವಿಕಲಚೇತನ ಮಕ್ಕಳಿಗಾಗಿ ಅನುದಾನವನ್ನು ನೀಡಲು ಸಭೆಯಲ್ಲಿ ಮಾತನಾಡುವದಾಗಿ ಹೇಳಿದರು.
ತಾಲೂಕು ಪಂಚಾಯಿತಿ ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿಶೇಷ ಅಗತ್ಯತೆವುಳ್ಳ ಮಕ್ಕಳು ಹೆಚ್ಚಿನ ವಿದ್ಯೆ ಕಲಿತು ಮುಂದೆ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತೆ ವಿದ್ಯಾರ್ಥಿ ಗಳಿಗೆ ಕರೆ ನೀಡಿದರು.
ಪಟ್ಟಣ ಪಂಚಾಯಿತಿ ಅಧ್ಯಕ್ಷ ಕೂತಂಡ ಸಚಿನ್, ಉಪಾಧ್ಯಕ್ಷೆ ತಸ್ನಿಂ ಅಕ್ತರ್, ಜಿಲ್ಲಾ ಉಪಯೋಜನಾಧಿಕಾರಿ ಸಿ.ಬಿ. ಭಾಗ್ಯಲಕ್ಷ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಮಾತನಾಡಿದರು.
ಮಡಿಕೇರಿಯ ಡಾ. ಕಿರಣ್ ಭಟ್, ಆಸ್ಪತ್ರೆ ಸಮಿತಿಯ ಜೋಕಿಂ ರಾಡ್ರಿಗಸ್, ಬಿ.ಆರ್.ಪಿ. ಉತ್ತಪ್ಪ ಉಪಸ್ಥಿತರಿದ್ದರು. ಶಿಕ್ಷಣಾಧಿಕಾರಿ ಹೆಚ್.ಕೆ. ಪಾಂಡು ಸ್ವಾಗತಿಸಿದರು. ಐ.ಇ.ಆರ್.ಟಿ.ಯ ಕೆ.ಎಸ್. ಅಜಿತಾ ನಿರೂಪಿಸಿದರೆ, ಕ್ಷೇತ್ರ ಸಮನ್ವಯ ಅಧಿಕಾರಿ ಎಸ್.ಪಿ. ಮಹದೇವ್ ವಂದಿಸಿದರು.
ತಪಾಸಣಾ ಶಿಬಿರದಲ್ಲಿ ತಾಲೂಕಿನಿಂದ 150ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿವಿಧ ದೋಷಗಳಿಗೆ ಸಂಬಂಧÀ ಪಟ್ಟಂತೆ ಕಂದ ಸಂಸ್ಥೆಯಿಂದ 5 ಹಾಗೂ ಜಿಲ್ಲಾ ಆಸ್ಪತ್ರೆಯಿಂದ 8 ವೈದ್ಯರುಗಳು ಮತ್ತು ಡಿ.ಆರ್.ಪಿ.-ಸಿ.ಆರ್.ಪಿ. ಅಧಿಕಾರಿಗಳು ಆಗಮಿಸಿದ್ದರು.