ಮೂರ್ನಾಡು, ಅ. 10: ಮೂರ್ನಾಡು ವಿದ್ಯಾಸಂಸ್ಥೆಯ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವಿಶೇಷ ವಾರ್ಷಿಕ ಶಿಬಿರಕ್ಕೆ ಚಾಲನೆ ನೀಡಲಾಯಿತು.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏಳು ದಿನಗಳ ಕಾಲ ಆಯೋಜಿಸಲಾದ ಶಿಬಿರವನ್ನು ಮಡಿಕೇರಿ ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್ ಉದ್ಘಾಟಿಸಿದರು.

ಹೊದ್ದೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕುಲ್ಲಚನ ಪಿ. ದಿನೇಶ್ ಧ್ವಜಾರೋಹಣ ನೆರವೇರಿಸಿದರು. ಮೂರ್ನಾಡು ವಿದ್ಯಾಸಂಸ್ಥೆಯ ಕಾರ್ಯದರ್ಶಿ ಚೌರೀರ ಎಂ. ಪೆಮ್ಮಯ್ಯ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಪಿ.ವಿ. ನಾರಾಯಣ, ಕುಂಬಳದಾಳು ಶಾಲಾ ಎಸ್‍ಡಿಎಂಸಿ ಅಧ್ಯಕ್ಷ ಮುಕ್ಕಾಟಿರ ಅಯ್ಯಪ್ಪ, ಶಾಲಾ ಮುಖ್ಯ ಶಿಕ್ಷಕ ದೇವಜನ ನಂದಕುಮಾರ್, ಕುಂಬಳದಾಳು ಕಾಫಿ ಬೆಳೆಗಾರರಾದ ದಂಬೆಕೋಡಿ ಸುಬ್ರಮಣಿ, ಕರ್ಣಯ್ಯನ ಸಿದ್ದಾರ್ಥ, ತೆಕ್ಕಡೆ ಪ್ರಸನ್ನ, ಗಜಾನನ ಯುವಕ ಸಂಘದ ಅಧ್ಯಕ್ಷ ಜಯಂತ್, ಮೂರ್ನಾಡು ಮಹಿಳಾ ಸಮಾಜದ ಅಧ್ಯಕ್ಷೆ ಸೀತಾದೇವಿ ಕಾರ್ಯಪ್ಪ, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ, ಎನ್‍ಎಸ್‍ಎಸ್ ಶಿಬಿರಾಧಿಕಾರಿ ಯು.ಸಿ. ಮಾಲತಿ ಇತರರು ಉಪಸ್ಥಿತರಿದ್ದರು. ಶಿಬಿರಾಧಿಕಾರಿ ಯು.ಸಿ. ಮಾಲತಿ ಸ್ವಾಗತಿಸಿ, ಶಿಬಿರಾರ್ಥಿ ಎಸ್. ನವೀನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಸಹ ಶಿಬಿರಾಧಿಕಾರಿ ಪಿ.ಎಸ್. ಅನುರಾಧ ವಂದಿಸಿದರು.