ಶನಿವಾರಸಂತೆ, ಅ. 20: ಸಮೀಪದ ಕೊಡ್ಲಿಪೇಟೆಯ ಕಿರಿಕೊಡ್ಲಿ ಮಠದ ಶಾಲಾ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ವೀರಶೈವ ಧಾರ್ಮಿಕ ಸಮಾವೇಶದಲ್ಲಿ ಭಾಗವಹಿಸಿದ್ದ ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾರ್ಯಕ್ರಮದ ನಂತರ ಶನಿವಾರಸಂತೆಗೆ ಭೇಟಿ ನೀಡಿದ್ದರು.

ಪಟ್ಟಣದ ಕಾನ್ವೆಂಟ್ ರಸ್ತೆಯಲ್ಲಿರುವ ವೀರಶೈವ ಲಿಂಗಾಯಿತ ಯುವ ವೇದಿಕೆ ರಾಜ್ಯ ಪ್ರಧಾನ ಕಾರ್ಯದರ್ಶಿ ಕವನ ಬಸವಕುಮಾರ್ ಅವರ ಮನೆಯಲ್ಲಿ ಯಡಿಯೂರಪ್ಪ ಅವರಿಗೆ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಈ ಸಂದರ್ಭ ಕವನ ಅವರ ತಂದೆ ಬಸವ ಕುಮಾರ್ ಕುಟುಂಬ ಸದಸ್ಯರೊಂದಿಗೆ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸನ್ಮಾನಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹಮದ್ ಗೌಸ್ ಹಾಗೂ ಇತರ ಆತ್ಮೀಯರು ಹಾಜರಿದ್ದರು.