ಮಡಿಕೇರಿ, ಜು. 15: ರಾಜ್ಯದ ಎಲ್ಲಾ ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಕಾಲೇಜುಗಳ ಕಟ್ಟಡಗಳ ಬಾಳಿಕೆ ಮತ್ತು ಸುರಕ್ಷತೆ ಕುರಿತು ಪರಿಶೀಲಿಸಿ ವರದಿ ನೀಡುವಂತೆ ರಾಜ್ಯದ ಪ್ರಾಥಮಿಕ ಶಿಕ್ಷಣ ಸಚಿವ ತನ್ವೀರ್ ಶÉೀಠ್ ಅವರು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

ಶಾಲಾ ಕಟ್ಟಡಗಳನ್ನು ಪರಿಶೀಲಿಸಲು ಕಂದಾಯ ಇಲಾಖೆ, ಸ್ಥಳೀಯ ನಗರ ಸಂಸ್ಥೆಗಳು, ಜಿಲ್ಲಾ ಪಂಚಾಯಿತಿ ಹಾಗೂ ಲೋಕೋಪಯೋಗಿ ಇಂಜಿನಿಯರ್‍ಗಳಿಂದ ತಪಾಸಣೆ ನಡೆಸಿ ಆಗಸ್ಟ್ 15 ರೊಳಗೆ ವರದಿ ಸಲ್ಲಿಸುವಂತೆ ಸಂಬಂಧಿಸಿದವರಿಗೆ ಈಗಾಗಲೇ ತಿಳಿಸಲಾಗಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.