ಮಡಿಕೇರಿ, ಜ. 4: ಮಡಿಕೇರಿ ತಾಲೂಕಿನ ಚೆಂಬು ಸರಕಾರಿ ಪ್ರೌಢ ಶಾಲೆ 2015-2016 ನೇ ಸಾಲಿನ ಹತ್ತನೇ ತರಗತಿ ಪರೀಕ್ಷೆಯಲ್ಲಿ ಶೇ. 99 ರಷ್ಟು ಫಲಿತಾಂಶ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಿದ್ದು, ಇದಕ್ಕೆ ಕಾರಣಕರ್ತರಾದ ಶಿಕ್ಷಕರುಗಳನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ತಾ. 10 ರಂದು ಸನ್ಮಾನಿಸಲು ನಿರ್ಧರಿಸಿದೆ ಎಂದು ಸಮಿತಿಯ ಸಂಚಾಲಕ ಹೆಚ್.ಎಲ್. ದಿವಾಕರ್ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿರುವ ಅವರು ಅಂದು ಮಧ್ಯಾಹ್ನ 2.30 ಗಂಟೆಗೆ ಚೆಂಬು ಸರಕಾರಿ ಪ್ರೌಢಶಾಲಾ ಆವರಣದಲ್ಲಿ ನಡೆಯುವÀ ಸನ್ಮಾನ ಸಮಾರಂಭವನ್ನು ಜಿಲ್ಲಾ ಆಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ. ಎಂ. ದೇವದಾಸ್ ಉದ್ಘಾಟಿಸಲಿದ್ದಾರೆ. ಸಮಿತಿ ಸಂಚಾಲಕ ಹೆಚ್.ಎಲ್. ದಿವಾಕರ್ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ವಿಜಯ ಬ್ಯಾಂಕ್ನ ಮಡಿಕೇರಿ ಶಾಖೆಯ ವ್ಯವಸ್ಥಾಪಕ ಪ್ರಸನ್ನ ಕುಮಾರ್ ಪಾಲ್ಗೊಳ್ಳಲಿದ್ದಾರೆ. ಸಮಿತಿಯ ವಿಭಾಗಿಯ ಸಂಚಾಲಕ ಎನ್. ವೀರಭದ್ರಯ್ಯ ಶಿಕ್ಷಕರುಗಳನ್ನು ಸನ್ಮಾನಿಸಲಿದ್ದು, ಮುಖ್ಯ ಅತಿಥಿಗಳಾಗಿ ದಾನಿ ಕಡಗದಾಳುವಿನ ಟಿ.ಆರ್. ವಾಸುದೇವ ಹಾಗೂ ಸಮಾಜ ಸೇವಕ ಟಿ.ಎ. ಮನೋರಂಜನ್ ಪಾಲ್ಗೊಳ್ಳುವರು.