ಕೂಡಿಗೆ, ಆ. 27: ವಿದ್ಯಾರ್ಥಿಗಳ ಜ್ಞಾನದ ಗುಣಮಟ್ಟ ಹಾಗೂ ಕಲಿಕೆಯ ವಿಚಾರದಲ್ಲಿ ಶಿಕ್ಷಕರುಗಳ ಪಾತ್ರ ಪ್ರಮುಖವಾಗಿರುತ್ತದೆ. ಇದರ ಒತ್ತಡದ ನಡುವೆ ಶಿಕ್ಷಕರು ಕ್ರೀಡಾಕೂಟದಲ್ಲಿ ಭಾಗವಹಿಸಿ ಕ್ರೀಡಾಭಾವನೆಯನ್ನು ಮೆರೆದಿರುವದು ಉತ್ತಮ ಎಂದು ಜಿಲ್ಲಾ ಪಂಚಾಯಿತಿಯ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಹೆಚ್.ಆರ್. ಶ್ರೀನಿವಾಸ್ ಅವರು ಕಣಿವೆಯಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರುಗಳ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸಮಾರೋಪ ಸಮಾರಂಭದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷೆ ಲತಾಮಣಿ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕೊಡಗು ಜಿಲ್ಲಾ ವಿದ್ಯಾ ಇಲಾಖೆಯ ನೌಕರರ ಪತ್ತಿನ ಸೌಹಾರ್ದ ಸಹಕಾರ ಸಂಘದ ಅಧ್ಯಕ್ಷ ಕೆ.ಕೆ. ಮಂಜುನಾಥ್, ಸೋಮವಾರಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ, ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ಚೇತನ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಸೋಮಶೇಖರ್, ತಾಲೂಕು ಪ್ರಾಥಮಿಕ ಶಿಕ್ಷಕ ಅಧ್ಯಕ್ಷ ಹೆಚ್.ಎನ್. ಮಂಜುನಾಥ್, ಪ್ರೌಢಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ಧರ್ಮಪ್ಪ, ತಾಲೂಕು ನೌಕರರ ಸಂಘದ ಅಧ್ಯಕ್ಷ ಪ್ರಸನ್ನ ಕುಮಾರ್, ತಾಲೂಕು ಶಿಕ್ಷಕರ ಸಂಘದ ಕಾರ್ಯದರ್ಶಿ ಬಸವರಾಜ್, ಕಣಿವೆ ಶಾಲೆಯ ಮುಖ್ಯೋಪಾಧ್ಯಾಯ ಗಣೇಶ್, ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ಕರುಂಬಯ್ಯ, ತಾಲೂಕು ಶಿಕ್ಷಕ ಸಂಘದ ನಿರ್ದೇಶಕರು ವೇದಿಕೆಯಲ್ಲಿ ಇದ್ದರು.