ಕೂಡಿಗೆ, ಅ. 22: ಭಾರತೀಯ ಜನತಾ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯಮಟ್ಟದ ಪರಿಶಿಷ್ಟ ಪಂಗಡಗಳ ಸಮಾವೇಶವನ್ನು ರಾಜ್ಯಾದ್ಯಂತ ನಡೆಸುತ್ತಿದ್ದು, ಅದರ ಅಂಗವಾಗಿ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ತಾ. 23 ರಂದು (ಇಂದು) ಸಮಾವೇಶ ನಡೆಯಲಿದೆ. ಸಮಾವೇಶಕ್ಕೆ ಕೊಡಗು ಜಿಲ್ಲೆಯ ಪರಿಶಿಷ್ಟ ಪಂಗಡಗಳ ಜಿಲ್ಲಾಧ್ಯಕ್ಷ ಎಸ್.ಎನ್. ರಾಜಾರಾವ್ ಅವರ ನೇತೃತ್ವದಲ್ಲಿ 100 ಕ್ಕೂ ಅಧಿಕ ಕಾರ್ಯಕರ್ತರು ಹಾಗೂ ಜನಪ್ರತಿನಿಧಿಗಳನ್ನೊಳಗೊಂಡಂತೆ ಜಿಲ್ಲೆಯ ಬಿಜೆಪಿ ಪರಿಶಿಷ್ಟ ಪಂಗಡಗಳ ವಿವಿಧ ವಿಭಾಗಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.