ಸುಂಟಿಕೊಪ್ಪ, ಆ. 4: ಖಾಸಗಿ ಶಾಲೆಗಳಿಗೆ ಹೋಲಿಸಿದರೆ ಸರ್ಕಾರಿ ಶಾಲೆಗಳ ಶಿಕ್ಷಣ ವ್ಯವಸ್ಥೆ ಉತ್ತಮವಾ ಗಿದೆ. ಆದರೆ ಸಾಮಾಜಿಕವಾಗಿ ಸರಕಾರಿ ಶಾಲೆಗಳನ್ನು ಕಡೆಗಣಿಸುತ್ತಿರು ವದು ದುರಂತ ಎಂದು ಮಡಿಕೇರಿ ಜಿಲ್ಲಾ ಆಸ್ಪತ್ರೆಯ ಸರ್ಜನ್ ಡಾ. ಸತೀಶ್ ಅಭಿಪ್ರಾಯಪಟ್ಟರು.
ಇಲ್ಲಿಗೆ ಸಮೀಪದ ಕಾನ್ಬೈಲ್ ಸರ್ಕಾರಿ ಪ್ರೌಢಶಾಲೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಶೇ. 97 ರಷ್ಟು ಫಲಿತಾಂಶ ಗಳಿಸುವ ಮೂಲಕ ಉತ್ತಮ ಸಾಧನೆ ಮಾಡಲು ಕಾರಣರಾದ ಶಿಕ್ಷಕರನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ಇತ್ತೀಚೆಗೆ ಶಾಲೆಯ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಸನ್ಮಾನ ಕಾರ್ಯ ಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ಸರ್ಕಾರವು ಸರ್ಕಾರಿ ಶಾಲೆಗಳಿಗೆ ಎಲ್ಲಾ ರೀತಿಯ ಅನುಕೂಲತೆಗಳನ್ನು ಮಾಡಿಕೊಟ್ಟಿದೆ. ಸುಧಾರಕರಾದ ಜ್ಯೋತಿ ಭಾಪುಲೆ, ದಾದಾ ಸಾಹೇಬ ಡಾ. ಬಿ.ಆರ್. ಅಂಬೇಡ್ಕರ್ ಅವರ ಪ್ರಬಲವಾದ ಹೊಣೆಗಾರಿಕೆಯಿಂದ ಕೆಳವರ್ಗದ ಜನರಿಗೂ ಉತ್ತಮ ಶಿಕ್ಷಣ ದೊರಕಿದಂತಾಗಿದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಶಿಕ್ಷಣವನ್ನು ಪಡೆದು ಅವರಂತೆ ಸಮಾಜದ ಕಲ್ಮಶಗಳನ್ನು ಹೊಗಲಾಡಿಸುವ ನಿಟ್ಟಿನಲ್ಲಿ ಜಾಗೃತರಾಗಬೇಕೆಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಡಿಕೇರಿಯ ವಕೀಲ ಕುಂಞಅಬ್ದುಲ್ಲ ಮಾತನಾಡಿ, ನಗರದಿಂದ ಬಹಳ ದೂರದಲ್ಲಿರುವ ಈ ಶಾಲೆಗೆ ಬೇಕಾದಂತಹ ಸವಲತ್ತುಗಳು ಇಲ್ಲದಿದ್ದರೂ ಶಿಕ್ಷಕ ವೃಂದದ ಕಠಿಣ ಪರಿಶ್ರಮದಿಂದ ಇಂತಹ ಫÀಲಿತಾಂಶ ದೊರಕಿದ್ದು, ಇದು ಕೊಡಗಿನ ಎಲ್ಲ ಸರ್ಕಾರಿ ಶಾಲೆಗಳಿಗೆ ಮಾದÀರಿಯಾಗಲಿದೆ. ಶಿಕ್ಷಣ ವ್ಯಾಪಾರೀಕರಣವಾಗಬಾರದು ಬದಲಿಗೆ ವ್ಯಕ್ತಿಯ ವ್ಯಕ್ತಿತ್ವದ ವಿಕಸನಕ್ಕೆ ಅಡಿಪಾಯವಾಗ ಬೇಕು. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಶಿಕ್ಷಕರಿಗೆ ಗೌರವವನ್ನು ನೀಡುವ ಮೂಲಕ ವಿದ್ಯೆಯ ಕಡೆ ಹೆಚ್ಚಿನ ಮಹತ್ವವನ್ನು ನೀಡಬೇಕೆಂದು ವಿದ್ಯಾರ್ಥಿಗಳಿಗೆ ತಿಳಿಸಿದರು. ಈ ಸಂದರ್ಭ ಶಿರಂಗಾಲ ತೋಟದ ಕಾಫಿ ಬೆಳೆಗಾರ ಚಂದ್ರಮತಿ ಗಣೇಶ್, ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ, ಸಮಿತಿಯ ಅಧ್ಯಕ್ಷ ಹೆಚ್.ಎಲ್. ದಿವಾಕರ್ ಮಾತನಾಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಕಾನ್ಬೈಲ್ ಸರಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕೆ.ಎನ್. ದಿನೇಶ್ ವಹಿಸಿದ್ದರು. ವೇದಿಕೆಯಲ್ಲಿ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಎಚ್.ಎ. ರವಿ, ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಐತಪ್ಪ ಇನ್ನಿತರರು ಇದ್ದರು. ಸಮಿತಿಯ ವತಿಯಿಂದ ಇಲ್ಲಿನ ಶಾಲಾ ಮುಖ್ಯ ಶಿಕ್ಷಕರು ಸೇರಿದಂತೆ ಎಲ್ಲ ಶಿಕ್ಷಕರಿಗೆ ಶಾಲು ಹೊದಿಸಿ ಫಲ ತಾಂಬೂಲ ನೀಡಿ ಸನ್ಮಾನಿಸ ಲಾಯಿತು. ವಿದ್ಯಾರ್ಥಿಗಳು ಪ್ರಾರ್ಥಿಸಿ, ಶಿಕ್ಷಕಿ ಮಾಲಾದೇವಿ ಸ್ವಾಗತಿಸಿ, ಸಮಿತಿಯ ವಿಭಾಗೀಯ ಸಂಚಾಲಕ ವೀರಭದ್ರಯ್ಯ ವಂದಿಸಿದರು. ಅಧ್ಯಕ್ಷ ದಿವಾಕರ್ ನಿರೂಪಿಸಿದರು.