ಕುಶಾಲನಗರ, ಆ. 27: ಕುಶಾಲನಗರದ ಕನ್ನಿಕಾ ವಿವಿಧೋದ್ದೇಶ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನೆ ಹಾಗೂ 14ನೇ ವಾರ್ಷಿಕೋತ್ಸವದ ಅಂಗವಾಗಿ ಸ್ಥಳೀಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಜೀವನ ಮಾಹಿತಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಗಳಾಗಿ ಪಾಲ್ಗೊಂಡಿದ್ದ ನಿವೃತ್ತ ಪ್ರಾಂಶುಪಾಲ ಗುರುಮಲ್ಲಪ್ಪ, ಕೂಡಿಗೆ ಕಾಬ್ಸೆಟ್ ಸ್ವಉದ್ಯೋಗ ತರಬೇತಿ ಕೇಂದ್ರದ ಅಧಿಕಾರಿಗಳಾದ ನಾಗೇಂದ್ರ ಮತ್ತು ಅನಿಲ್ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾಲೇಜಿನ 100 ಕ್ಕೂ ಅಧಿಕ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಸರಕಾರಿ ಪದವಿಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಎನ್. ವಸಂತ ಕುಮಾರ್ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಂಘದ ಅಧ್ಯಕ್ಷ ಕೆ.ಆರ್. ರವಿಕುಮಾರ್, ಕಾರ್ಯಕ್ರಮ ಸಂಯೋಜಕ ಪಿ.ಡಿ. ಪ್ರಶಾಂತ್, ವಾಸವಿ ಯುವಜನ ಸಂಘದ ಅಧ್ಯಕ್ಷ ವಿ.ಆರ್. ಮಂಜುನಾಥ್, ಮಹಿಳಾ ಮಂಡಳಿ ಅಧ್ಯಕ್ಷೆ ಆಶಾ ಅಶೋಕ್, ಸಂಘದ ನಿರ್ದೇಶಕರಾದ ವೈಶಾಖ್, ಚಿತ್ರಾ ರಮೇಶ್, ಕಾರ್ಯದರ್ಶಿ ಶಕುಂತಲಾ, ಕಾಲೇಜು ಪ್ರಾಂಶುಪಾಲ ಸತೀಶ್ ಬಾಬು ಮತ್ತಿತರರು ಇದ್ದರು.