ಸೋಮವಾರಪೇಟೆ, ಸೆ. 1: ಪಟ್ಟಣದ ಬೇಳೂರು ರಸ್ತೆಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಚೌಡ್ಲು ಸಾಂದೀಪನಿ ಶಾಲಾ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ, ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.
ಜಿ.ಪಂ., ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷ ಅಭಿಯಾನ ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ವಲಯಮಟ್ಟದ ಪ್ರತಿಭಾಕಾರಂಜಿ ಸ್ಪರ್ಧೆಯಲ್ಲಿ ಸಾಂದೀಪನಿ ಶಾಲೆಯ ವಿದ್ಯಾರ್ಥಿಗಳು ವಿಶೇಷ ಪ್ರತಿಭೆಗಳನ್ನು ಮೆರೆಯುವ ಮೂಲಕ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ.
ವಿವಿಧ ಹಂತದ 22 ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದಿರುವ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದು, ನಾಲ್ಕನೇ ತರಗತಿಯ ವಿದ್ಯಾರ್ಥಿನಿ ಕೆ.ಎಸ್. ಸುದೀಕ್ಷ ನಾಲ್ಕು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದು ವೈಯಕ್ತಿಕ ಚಾಂಪಿಯನ್ ಶಿಪ್ ಪಡೆದಿರುತ್ತಾಳೆ ಎಂದು ಶಾಲಾ ಮುಖ್ಯೋಪಾಧ್ಯಾಯ ಕಿಶೋರ್ ಕುಮಾರ್ ತಿಳಿಸಿದ್ದಾರೆ.