ಸೋಮವಾರಪೇಟೆ, ಸೆ. 2: ಇಂದು ಸಮಾಜದಲ್ಲಿ ಸ್ವಾತಂತ್ರ್ಯದ ಅತಿಯಾದ ಬಳಕೆಯಾಗುತ್ತಿದ್ದು, ಕೆಲವರು ಬಾಯಿಗೆ ಬಂದ ಹಾಗೆ ಮಾತನಾಡುತ್ತಿರುವದನ್ನು ಕಾಣಬಹುದಾಗಿದೆ. ಸ್ವಾತಂತ್ರ್ಯದ ಹೆಸರಿನಲ್ಲಿ ಸ್ವೇಚ್ಛಾಚಾರ ಸಲ್ಲದು ಎಂದು ಜೈ ಜವಾನ್ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಬಿ.ಆರ್. ಈರಪ್ಪ ಹೇಳಿದರು.

ಇಲ್ಲಿನ ಮಹಿಳಾ ಸಮಾಜದಲ್ಲಿ ನಡೆದ ಸಂಘದ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆಯನ್ನು ವಹಿಸಿ ಅವರು ಮಾತನಾಡಿದರು. ನಮಗೆ ಸಿಕ್ಕಿರುವ ಸ್ವಾತಂತ್ರ್ಯದ ಬಳಕೆಯೊಂದಿಗೆ ನಮ್ಮ ಕರ್ತವ್ಯವನ್ನು ನಿಭಾಯಿಸಲು ಮುಂದಾಗಬೇಕು. ಮಾಜಿ ಯೋಧರು ಸಮಾಜದ ಸ್ವಾಸ್ಥ್ಯ ಕಾಪಾಡಬೇಕೆಂದರು. ಮಾದರಿ ಸಮಾಜ ನಿರ್ಮಾಣ ಮಾಡಲು ಮಾಜಿ ಯೋಧರು ಶ್ರಮಿಸಬೇಕು. ಮಾಜಿ ಸೈನಿಕರ ಬೇಡಿಕೆಗಳನ್ನು ಸರ್ಕಾರ ಪ್ರಾಮಾಣಿಕವಾಗಿ ಈಡೇರಿಸಬೇಕು ಎಂದು ಈರಪ್ಪ ಮನವಿ ಮಾಡಿದರು.

ವೇದಿಕೆಯಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮಿ ಸುರೇಶ್, ತಾಲೂಕು ಪಂಚಾಯಿತಿ ಸದಸ್ಯೆ ಸವಿತಾ, ವಾಹನ ಚಾಲಕರು ಮತ್ತು ಮೋಟಾರು ಕೆಲಸಗಾರರ ಸಂಘದ ಅಧ್ಯಕ್ಷ ಸಿ.ಸಿ. ನಂದ, ಆಟೋ ಚಾಲಕರ ಸಂಘದ ಅಧ್ಯಕ್ಷ ಮೋಹನ್, ಸಂಘದ ಹಿರಿಯ ಸದಸ್ಯ ಬಿ.ಎಂ. ಗಣೇಶ್ ಮತ್ತಿತರರು ಉಪಸ್ಥಿತರಿದ್ದರು.