ಮಡಿಕೇರಿ, ಆ. 17: ಸಮನ್ವಯ ಸಾಂಸ್ಕøತಿಕ ವೇದಿಕೆ ಹಾಗೂ ಸ್ನೇಹ ಭೂಮಿ ಟ್ರಸ್ಟ್ ವತಿಯಿಂದ ತಾ. 20 ರಂದು ‘ಕೊಡಗು ಜಿಲ್ಲೆಯಲ್ಲಿ ಸ್ವಾತಂತ್ರ್ಯ ಸಂಗ್ರಾಮ’ ವಿಚಾರದ ಕುರಿತು ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ಆಯೋಜಕರು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ನೇಹ ಭೂಮಿ ಟ್ರಸ್ಟ್‍ನ ಕಾರ್ಯದರ್ಶಿ ಕೆ.ವಿ.ಸುನಿಲ್ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ತಾ. 20 ರಂದು ನಗರದ ಬಾಲಭವನದಲ್ಲಿ ಸಾಹಿತಿ ಬಿ.ಎ. ಷಂಶುದ್ದೀನ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿಗಳು ಹಾಗೂ ವಕೀಲರಾದ ಕೆ.ಪಿ. ಬಾಲಸುಬ್ರಹ್ಮಣ್ಯ ಅವರು ಉಪನ್ಯಾಸ ನೀಡಲಿದ್ದಾರೆ, ಕಾರ್ಯಕ್ರಮದಲ್ಲಿ ವಕೀಲ ಸಿ.ಬಿ. ಚಂದನ್, ನಿವೃತ್ತ ಅಧ್ಯಾಪಕ ಲತೀಫ್, ಪ್ರಮುಖರಾದ ಕೆ.ಎಸ್. ರತೀಶ್ ಉಪಸ್ಥಿತರಿರುವರು.

ಕೊಡಗು ಜಿಲ್ಲೆಯಲ್ಲಿ ನಡೆದ ಸ್ವಾತಂತ್ರ್ಯ ಸಂಗ್ರಾಮ ಮತ್ತು ಪ್ರಚಲಿತ ವಿದ್ಯಮಾನಗಳ ಬಗ್ಗೆ ಉಪನ್ಯಾಸ ಕಾರ್ಯಕ್ರಮದಲ್ಲಿ ಸಮಾಲೋಚನೆ ನಡೆಸಲಾಗುವದು. ಇತ್ತೀಚಿನ ದಿನಗಳಲ್ಲಿ ಶಾಲಾ ಮಕ್ಕಳು ಮತ್ತು ಜಿಲ್ಲಾಡಳಿತಕ್ಕೆ ಮಾತ್ರ ಸ್ವಾತಂತ್ರ್ಯ ದಿನಾಚರಣೆ ಸೀಮಿತವಾಗುತ್ತಿದ್ದು, ಎಲ್ಲರಲ್ಲೂ ಸ್ವಾತಂತ್ರ್ಯೋತ್ಸವ ಹಾಗೂ ಸ್ವಾತಂತ್ರ್ಯ ಹೋರಾಟದ ದಿನಗಳ ಬಗ್ಗೆ ಅರಿವು ಮೂಡಿಸುವ ಅಗತ್ಯವಿದೆ. ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಯುವ ಸಮೂಹಕ್ಕೆ ಪರಿಚಯಿಸುವ ಉದ್ದೇಶದಿಂದ ಉಪನ್ಯಾಸ ಕಾರ್ಯ ಕ್ರಮವನ್ನು ಹಮ್ಮಿಕೊಂಡಿರುವದಾಗಿ ಕೆ.ವಿ. ಸುನಿಲ್ ತಿಳಿಸಿದರು.

ಸುದ್ದಿಗೊಷ್ಠಿಯಲ್ಲಿ ಸಮನ್ವಯ ಸಾಂಸ್ಕøತಿಕ ವೇದಿಕೆಯ ಅಧ್ಯಕ್ಷರಾದ ಸಿ.ಬಿ. ಚಂದನ್ ಹಾಗೂ ಸದಸ್ಯರಾದ ಪವಾಜ್ ಉಪಸ್ಥಿತರಿದ್ದರು.