ಮಡಿಕೇರಿ, ಅ. 22: ನಾಲ್ಕನೇ ರಾಜ್ಯ ಹಣಕಾಸು ಆಯೋಗ ತಾ. 28 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆಯೋಗ ತಾ. 28 ರಂದು ಬೆಳಿಗ್ಗೆ 10 ಗಂಟೆಗೆ ಕೊಡಗು ಜಿಲ್ಲಾ ಪಂಚಾಯಿತಿಗೆ ಭೇಟಿ ನೀಡಿ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾ ಪಂಚಾಯಿತಿಯ ಅಧ್ಯಕ್ಷರು, ಜಿ.ಪಂ. ಉಪಾಧ್ಯಕ್ಷರು, ಸ್ಥಾಯಿ ಸಮಿತಿ ಅಧ್ಯಕ್ಷರು, ಸದಸ್ಯರು, ಸಂಸದರು, ಶಾಸಕರು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಜಿಲ್ಲೆಯ ಎಲ್ಲಾ ತಾಲೂಕು ಪಂಚಾಯಿತಿ ಅಧಕ್ಷರು, ಉಪಾಧ್ಯಕ್ಷರು, ಕಾರ್ಯನಿರ್ವಾಹಕ ಅಧಿಕಾರಿಗಳು, ಆಯ್ದ 5 ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಮಧ್ಯಾಹ್ನ 12.30 ಗಂಟೆಗೆ ನಗರಸಭೆಗೆ ಭೇಟಿ ನೀಡಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಚರ್ಚೆ. ನಂತರ ಮಧ್ಯಾಹ್ನ 2.30 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು, ಜಿಲ್ಲಾಧಿಕಾರಿಗಳು ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಅಧ್ಯಕ್ಷರು, ಉಪಾಧ್ಯಕ್ಷರು, ನಗರ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಆಯುಕ್ತರು, ಪೌರಾಯುಕ್ತರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ.
ಬಳಿಕ ಮಧ್ಯಾಹ್ನ 3.30 ಗಂಟೆಗೆ ಆಯ್ದ ಒಂದು ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಭೆ ಹಾಗೂ ಸಂಜೆ 4.30 ಗಂಟೆಗೆ ಕುಶಾಲನಗರದ ಪುರಸಭೆಗೆ ಭೇಟಿ ನೀಡಿ ನಗರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ನಾಲ್ಕನೇ ರಾಜ್ಯ ಹಣಕಾಸು ಆಯೋಗದ ಕಾರ್ಯದರ್ಶಿ ವಿ. ಯಶವಂತ್ ತಿಳಿಸಿದ್ದಾರೆ.