ವೀರಾಜಪೇಟೆ, ಜ. 18: ರಾಜ್ಯದಲ್ಲಿ ಮಹಿಳೆಯರ ಮೇಲೆ ನಿರಂತರ ಅತ್ಯಾಚಾರ, ದೌರ್ಜನ್ಯಗಳು ನಡೆಯುತ್ತಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ರಾಜ್ಯ ಮಾನವ ಹಕ್ಕುಗಳ ಜಾಗೃತಿ ಸಮಿತಿ ಅಧ್ಯಕ್ಷ ಡಾ ಸಮೇತನಹಳ್ಳಿ ಲಕ್ಷ್ಮಣ್ ಸಿಂಗ್ ಆರೋಪಿಸಿದರು.

ಕೊಡಗು ಜಿಲ್ಲೆ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಾನವ ಹಕ್ಕುಗಳ ಜಿಲ್ಲಾ ಘಟಕದ ಸಂಯುಕ್ತ ಆಶ್ರಯದಲ್ಲಿ ಇಂದು ಬಾಳುಗೋಡು ಬಿಟ್ಟಂಗಾಲ ಕೊಡಗು ಹೆಗ್ಗಡೆ ಸಮಾಜದಲ್ಲಿ ಹಮ್ಮಿಕೊಂಡಿದ್ದ ಕಾನೂನು ಅರಿವು ವಿಚಾರ ಸಂಕೀರ್ಣ ಮತ್ತು ಇತ್ತೀಚಿನ ವಿದ್ಯಾಮಾನಗಳ ಅರಿವಿನÀ ಬಗ್ಗೆ ನಡೆದ ಸಮಾರಂಭದಲ್ಲಿ ದೀಪ ಬೆಳಗಿಸಿ ಮಾತನಾಡಿದ ಲಕ್ಷ್ಮಣ್ ಅವರು ದೇಶದಲ್ಲಿ, 1995ರಲ್ಲಿ ಮಾನವ ಹಕ್ಕುಗಳ ಆಯೋಗ ರಚನೆಗೊಂಡು 2007ರಲ್ಲಿ ಕರ್ನಾಟಕದಲ್ಲಿ ಅಸ್ತಿತ್ವಕ್ಕೆ ಬಂದಿತು. ದೇಶದ 30 ರಾಜ್ಯದ 683 ಜಿಲ್ಲೆಗಳ 6400 ಜಾತಿಗಳ, 1618 ಭಾಷೆಗಳಿದೆ. ರಾಷ್ಟ್ರದ 5ಲಕ್ಷದ 58 ಸಾವಿರ ಹಳ್ಳಿಗಳಲ್ಲಿ ದಿನಕ್ಕೊಂದು ಬಾರಿಯಾದರೂ ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿದೆ ಎಂದರು.

ವೇದಿಕೆಯಲ್ಲಿ ರಾಜ್ಯ ಮಾನವ ಹಕ್ಕುಗಳ ಜಾಗೃತಿ ಸಮಿತಿಯ ಉಲ್ಲೇಖನ ಅಧಿಕಾರಿ ರಾಜು, ಕನ್ನಡ ಸಾಹಿತ್ಯ ಪರಿಷತ್‍ನ ತಾಲೂಕು ಅಧ್ಯಕ್ಷ ಮದೋಷ್ ಪೂವಯ್ಯ, ರಾಜ್ಯ ಉಪಾಧ್ಯಕ್ಷ ಮುನಿಯಪ್ಪ, ಸದಾನಂದ, ಮೈಸೂರು ರೋಟರಿ ಶಾಲಾ ಪ್ರಾಂಶುಪಾಲೆ ಸುನೀತಾ, ಸಂಘಟನಾ ಕಾರ್ಯದರ್ಶಿ ಪ್ರಭಾಕರ್ ಮಹಿಳಾ ವಿಭಾಗದ ಜಿಲ್ಲಾ ಸಮಿತಿ ಅಧ್ಯಕ್ಷೆ ಪಡಿಕಲ್ ಕುಸುಮಾವತಿ ಚಂದ್ರಶೇಖರ್, ಸಮಿತಿಯ ಗೌರವ ಜಿಲ್ಲಾಧ್ಯಕ್ಷ ಬೋರಯ್ಯ, ರಾಜ್ಯ ಆದಿವಾಸಿ ಸಂಘಟನೆಯ ಅಧ್ಯಕ್ಷ ವೈ.ಕೆ.ಗಣೇಶ್ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಉಪಾಧ್ಯಕ್ಷೆ ಪುಟ್ಟಮ್ಮ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಕೊಡಗು ಜಿಲ್ಲಾಧ್ಯಕ್ಷ ಸಂದೇಶ್ ಜೋಸೆಫ್ ಡಿಸೋಜಾ ಸ್ವಾಗತಿಸಿದರು.