ಕುಶಾಲನಗರ, ಸೆ. 20: ಹಾರಂಗಿ ಜಲಾಶಯದಿಂದ ಕಾಲುವೆಗೆ ನೀರು ಹರಿಸುವದನ್ನು ಸ್ಥಗಿತಗೊಳಿಸಲಾಗಿದೆ. ನದಿಗೆ 2 ಸಾವಿರ ಕ್ಯೂಸೆಕ್ ಪ್ರಮಾಣದ ನೀರು ಮತ್ತೆ ಹರಿಸಲಾಗುತ್ತಿದೆ. ಮಂಗಳವಾರ ಬೆಳಗ್ಗೆಯಿಂದ ಮಧ್ಯಾಹ್ನದ ತನಕ ಜಲಾಶಯದಿಂದ ಸಂಪೂರ್ಣ ಹೊರಹರಿವು ಸ್ಥಗಿತಗೊಳಿಸಲಾಗಿತ್ತು. ಮಧ್ಯಾಹ್ನ 1 ಗಂಟೆಯಿಂದ ನದಿಗೆ 2 ಸಾವಿರ ಕ್ಯೂಸೆಕ್ಸ್ ಪ್ರಮಾಣ ನೀರು ಹರಿಸಲು ಸರಕಾರ ಆದೇಶ ಹೊರಡಿಸಿದೆ ಎಂದು ಅಣೆಕಟ್ಟೆ ವಿಭಾಗದ ಮೂಲಗಳು ತಿಳಿಸಿವೆ.
ಮಂಗಳವಾರ ಮಧ್ಯಾಹ್ನ ವೇಳೆಗೆ ಜಲಾಶಯದಲ್ಲಿ ನೀರಿನ ಮಟ್ಟ 2841.43 ಅಡಿಗಳಷ್ಟಿದ್ದು ಒಳಹರಿವು 900 ಕ್ಯೂಸೆಕ್ ಇರುವದಾಗಿ ತಿಳಿದು ಬಂದಿದೆ.
ಜಲಾಶಯದ ಗರಿಷ್ಠ ಸಂಗ್ರಹ ಸಾಮಥ್ರ್ಯ 8.5 ಟಿಎಂಸಿಗಳಾಗಿದ್ದು ಮಂಗಳವಾರ ಮಧ್ಯಾಹ್ನ ವೇಳೆಗೆ 3.5 ಟಿಎಂಸಿ ನೀರಿನ ಸಂಗ್ರಹ ಕಂಡುಬಂದಿದೆ.