ಮಡಿಕೇರಿ, ಸೆ. 16: ವೀರಾಜಪೇಟೆಯ ಕೊಡಗು ಜಿಲ್ಲಾ ಮಾಜಿ ಸೈನಿಕರ ಸಹಕಾರ ಸಂಘದ ವತಿಯಿಂದ ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮ ತಾ. 21 ರಂದು ಪೂರ್ವಾಹ್ನ 10.30 ಗಂಟೆಗೆ ಚೇಂದ್ರಿಮಾಡ ಕೆ. ನಂಜಪ್ಪ ಅವರ ಅಧ್ಯಕ್ಷತೆಯಲ್ಲಿ ಅಮರ ಜವಾನ ಸ್ಮಾರಕದಲ್ಲಿ ನಡೆಸಲು ತೀರ್ಮಾನಿಸಲಾಗಿದೆ.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ನಿವೃತ್ತ ಲೆ.ಜ. ಬಿದ್ದಂಡ ನಂದ, ನಿವೃತ್ತ ಕರ್ನಲ್ ನೆರ್ಪಂಡ ಎ. ಚಿಣ್ಣಪ್ಪ, ಲೋಕಸಭಾ ಸದಸ್ಯ ಪ್ರತಾಪ್ ಸಿಂಹ, ಶಾಸಕ ಕೆ.ಜಿ. ಬೋಪಯ್ಯ, ತಹಶೀಲ್ದಾರ್ ಮಹಾದೇವ ಸ್ವಾಮಿ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಕೂತಂಡ ಸಚಿನ್ ಕುಟ್ಟಯ್ಯ ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಆಡಳಿತ ಮಂಡಳಿ ವ್ಯವಸ್ಥಾಪಕರು ತಿಳಿಸಿದ್ದಾರೆ.