ನಾಪೆÇೀಕ್ಲು, ಜೂ. 14: ಕೊಡಗು ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅಪ್ಪಚೆಟ್ಟೋಳಂಡ ಮನು ಮುತ್ತಪ್ಪ ಅವರಿಗೆ ನಾಪೆÇೀಕ್ಲು ಪಟ್ಟಣದಲ್ಲಿ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿ ಸಂಭ್ರಮಿಸಿದರು. ಈ ಸಂದರ್ಭ ಸುದ್ದಿಗಾರರೊಂದಿಗೆ ಮಾತನಾಡಿದ ಮನು ಮುತ್ತಪ್ಪ, ಇದು ಈ ವ್ಯಾಪ್ತಿಯ ಕಾರ್ಯಕರ್ತರ ಶ್ರಮಕ್ಕೆ ಸಂದ ಜಯವಾಗಿದೆ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷದ ಸಂಘಟನೆಯಲ್ಲಿ ತೊಡಗಿದ ನನಗೆ ವರಿಷ್ಠರು ಜಿಲ್ಲೆಯ ಜವಾಬ್ದಾರಿ ನೀಡಿದ್ದಾರೆ. ಇದನ್ನು ಉತ್ತಮವಾಗಿ ನಿಭಾಯಿಸುವ ವಿಶ್ವಾಸವಿದೆ. ಇದಕ್ಕೆ ಎಲ್ಲಾ ಕಾರ್ಯಕರ್ತರ ಸಂಪೂರ್ಣ ಸಹಕಾರವಿದೆ. ಮುಂದಿನ ವಿಧಾನ ಸಭಾ ಚುನಾವಣೆಯಲ್ಲಿ ಬಿ.ಜೆ.ಪಿ.ಯನ್ನು ಅಧಿಕಾರಕ್ಕೆ ತರುವದೇ ತಮ್ಮ ಗುರಿಯಾಗಿದೆ ಎಂದು ಹೇಳಿದರಲ್ಲದೆ, ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಶಾಸಕರಾದ ಕೆ.ಜಿ. ಬೋಪಯ್ಯ, ಅಪ್ಪಚ್ಚು ರಂಜನ್, ಎಂ.ಎಲ್.ಸಿ. ಸುನಿಲ್ ಸುಬ್ರಮಣಿ ಅವರುಗಳಿಗೆ ಕೃತಜ್ಞತೆ ಸಲ್ಲಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ಡಿ.ಸಿ.ಸಿ. ಬ್ಲಾಕ್ ಉಪಾಧ್ಯಕ್ಷ ಕೇಟೋಳಿರ ಹರೀಶ್ ಪೂವಯ್ಯ, ಸ್ಥಾನೀಯ ಸಮಿತಿ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ, ಮಡಿಕೇರಿ ತಾಲೂಕು ಪಂಚಾಯಿತಿ ಸದಸ್ಯೆ ನೆರೆಯಂಡಮ್ಮಂಡ ಉಮಾ ಪ್ರಭು, ಬಲ್ಲಮಾವಟಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಕರವಂಡ ಸರಸು ಪೆಮ್ಮಯ್ಯ, ನೆಲಜಿ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚೀಯಕಪೂವಂಡ ಅಪ್ಪಚ್ಚು, ಕೊಡವ ಸಮಾಜದ ಅಧ್ಯಕ್ಷ ಬಿದ್ದಾಟಂಡ ರಮೇಶ್ ಚಂಗಪ್ಪ, ಕುಂಡ್ಯೋಳಂಡ ರಮೇಶ್ ಮುದ್ದಯ್ಯ, ಅರೆಯಡ ಅಶೋಕ್, ಕಾಂಡಂಡ ಜಯಾ ಕರುಂಬಯ್ಯ, ಅಪ್ಪಾರಂಡ ಸುಧೀರ್ ಅಯ್ಯಪ್ಪ, ಪಾಡಿಯಮ್ಮಂಡ ಮನು ಮಹೇಶ್, ಹೊಸೋಕ್ಲು ಮತ್ತಪ್ಪ, ಕರವಂಡ ಲವ ನಾಣಯ್ಯ, ಶಿವಚಾಳಿಯಂಡ ಜಗದೀಶ್, ರಾಧಾಕೃಷ್ಣ ರೈ, ಪ್ರತೀಪ್, ಅಪ್ಪನೆರವಂಡ ಕಿರಣ್ ಕಾರ್ಯಪ್ಪ, ಕಾಡಂಡ ಅಚ್ಚಪ್ಪ ಮತ್ತಿತರ ಕಾರ್ಯಕರ್ತರು ಇದ್ದರು.