*ಸಿದ್ದಾಪುರ, ಜೂ. 14: ಅಮೃತ ಯುವ ಮೊಗೇರ ಸೇವಾ ಸಮಾಜದ ವತಿಯಿಂದ ಸಮುದಾಯದ ವಿದ್ಯಾರ್ಥಿಗಳಿಗೆ 6ನೇ ವರ್ಷದ ಉಚಿತ ಪಠ್ಯ ಪುಸ್ತಕ ವಿತರಣಾ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪಂಚಾಯಿತಿ ಸದಸ್ಯ ಮುಕೊಂಡ ವಿಜು ಸುಬ್ರಮಣಿ ಉದ್ಘಾಟನೆ ನೆರೆವೇರಿಸಿ ಮಾತನಾಡಿ, ಸಮಾಜವು ತಮ್ಮ ಅಚಾರ-ವಿಚಾರ, ಸಂಸ್ಕøತಿಯ ನಡುವೆ ವಿಭಿನ್ನ ರೀತಿಯಲ್ಲಿ ಸೇವೆ ಸಲ್ಲಿಸಿಕೊಂಡು ಬಂದಿದೆ. ಪಠ್ಯ ಪುಸ್ತಕ ವಿತರಣೆ ನಡುವೆ, ರಕ್ತದಾನ, ರಾಜ್ಯಮಟ್ಟದ ಕ್ರೀಡಾಕೂಟದ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಕೊಂಡಿದೆ.

ವಿದ್ಯಾರ್ಥಿಗಳು ಸೌಲಭ್ಯದ ಪ್ರಯೋಜನ ಪಡೆದುಕೊಂಡು ಉತ್ತಮ ಗುಣ ಮಟ್ಟದ ಶಿಕ್ಷಣದೊಂದಿಗೆ ಸಮಾಜದ ಮುಖ್ಯ ವಾಹಿನಿಗೆ ಬಂದಲ್ಲಿ ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದಂತಾಗು ವದು ಎಂದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯ ಎಂ.ಎಸ್. ವೆಂಕಟೇಶ್ ಮಾತನಾಡಿ, ಸಮಾಜದ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ನೀಡುತ್ತಾ ಬಂದ್ದು, ಇದರಿಂದ ಬಹಳಷ್ಟು ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಂಡಿದ್ದಾರೆ. ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳು ವಲ್ಲಿ ಸಮಾಜ ತಮ್ಮನ್ನು ತೊಡಗಿಸಿ ಕೊಳ್ಳಬೇಕು ಎಂದರು. ಸಿದ್ದಾಪುರ ಗ್ರಾ.ಪಂ. ಅಧ್ಯಕ್ಷ ಎಂ.ಕೆ. ಮಣಿ ಮಾತನಾಡಿ, ಗ್ರಾಮ ಪಂಚಾಯಿತಿಯಲ್ಲಿ ಸರಕಾರದಿಂದ ವಿದ್ಯಾರ್ಥಿಗಳಿಗೆ ಹತ್ತು ಹಲವು ಸೌಲಭ್ಯಗಳಿದ್ದು, ವಿದ್ಯಾರ್ಥಿ ಗಳು ಕಚೇರಿ ವೇಳೆ ಬಂದು ಮಾಹಿತಿ ಸಂಗ್ರಹಿಸಿಕೊಂಡು ಸೌಲಭ್ಯ ಪಡೆದುಕೊಳ್ಳುವಂತೆ ಮಾಹಿತಿ ನೀಡಿದರು.

1ನೇ ತರಗತಿಯಿಂದ ಪ್ರಥಮ ಪಿಯುಸಿಯವರೆಗಿನ, ಸೋಮವಾರ ಪೇಟೆ, ವೀರಾಜಪೇಟೆ, ಅಮ್ಮತ್ತಿ, ಪಾಲಿಬೆಟ್ಟ, ಸಿದ್ದಾಪುರ, ಮಾಲ್ದಾರೆ ಭಾಗದ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ಪೋಷಕರೊಂದಿಗೆ ಆಗಮಿಸಿ ಪಠ್ಯ ಪುಸ್ತಕಗಳನ್ನು ಪಡೆದುಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೊಗೇರ ಸಮಾಜದ ಅಧ್ಯಕ್ಷ ಐ. ಕೃಷ್ಣ ವಹಿಸಿದ್ದರು. ವೀರಾಜಪೇಟೆ ತಾಲೂಕು ಅಮೃತ ಯುವ ಮೊಗೇರ ಸಮಾಜದ ಅಧ್ಯಕ್ಷ ಜಿ. ಮೋಹನ್, ಗೌರವ ಅಧ್ಯಕ್ಷೆ ಅಕ್ಕಮ್ಮ ,ಸ್ಧಾನೀಯ ಬಿಜೆಪಿ ಉಪಾಧ್ಯಕ್ಷ ಪಿ.ಸಿ. ರಾಜು. ರಾಜ್ಯ ಗೌರವ ಅಧ್ಯಕ್ಷ ಮಂಜು, ರಘು, ಸೇರಿದಂತೆ ಸಮಾಜದ ಕಾರ್ಯಕರ್ತರು ಹಾಜರಿದ್ದರು.