ಕೂಡಿಗೆ, ಜೂ. 14: ಅನೇಕ ದಿನಗಳ ಬೇಡಿಕೆಯಂತೆ ಕುಶಾಲನಗರಕ್ಕೆ ಗ್ರಾಮಾಂತರ ಪೊಲೀಸ್ ಠಾಣೆ ಮಂಜೂರಾಗಿ 6 ತಿಂಗಳಿನಿಂದ ಕಾರ್ಯನಿರ್ವಹಿಸುತ್ತಿದ್ದು ಇದೀಗ ಕೂಡ್ಲೂರು ಕೈಗಾರಿಕಾ ಕೇಂದ್ರದಲ್ಲಿದ್ದ ರೇಷ್ಮೆ ಮಾರುಕಟ್ಟೆ ಕೇಂದ್ರಕ್ಕೆ ಸ್ಥಳಾಂತರಗೊಳ್ಳಲು ಭರದ ಸಿದ್ಧತೆ ನಡೆಯುತ್ತಿದೆ.

ಠಾಣೆಯ ಅನುಕೂಲತೆಗೆ ಬೇಕಾಗುವಂತಹ ಕೆಲಸಗಳನ್ನು ತುರ್ತಾಗಿ ಕೈಗೊಳ್ಳುವ ಕಾರ್ಯದಲ್ಲಿ ಸಿಬ್ಬಂದಿಗಳು ತೊಡಗಿದ್ದಾರೆ.

ಕುಶಾಲನಗರ ಹೋಬಳಿ ವ್ಯಾಪ್ತಿಯ ಜನಸಂಖ್ಯೆಯ ಆಧಾರದ ಮೇಲೆ ಮುಳ್ಳುಸೋಗೆ, ಕೂಡುಮಂಗಳೂರು, ಕೂಡಿಗೆ, ಹೆಬ್ಬಾಲೆ, ತೊರೆನೂರು, ಗುಡ್ಡೆಹೊಸೂರು, ಪ್ರಮುಖ ಗ್ರಾಮ ಪಂಚಾಯಿತಿ ವ್ಯಾಪ್ತಿಯಾಗಿರುವದರಿಂದ ಈ ಎಲ್ಲಾ ಗ್ರಾ.ಪಂಗಳ ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ರಾಮಾಂತರದಲ್ಲೇ ಪ್ರಾರಂಭಗೊಳ್ಳಲು ಕೈಗಾರಿಕಾ ಕೇಂದ್ರದಲ್ಲಿ ಸಿದ್ಧತೆ ನಡೆಯುತ್ತಿದೆ.

ಸಿದ್ಧತೆಯನ್ನು ಕುಶಾಲನಗರ ಡಿವೈಎಸ್‍ಪಿ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣಾಧಿಕಾರಿ ಮಹೇಶ್ ಪರಿಶೀಲಿಸಿದರು.