ಭಾಗಮಂಡಲ, ಆ. 19 : ಸಂಘ- ಸಂಸ್ಥೆಗಳು ಮಾನವೀಯ ಮೌಲ್ಯಗಳಿಗೆ ಸ್ಪಂದಿಸುವಂತಹ ಕೆಲಸ ಮಾಡಬೇಕಾಗಿದೆ ಎಂದು ಕಾವೇರಿ ಪದವಿಪೂರ್ವ ಕಾಲೇಜಿನ ಅಧ್ಯಕ್ಷ ಹೊಸೂರು ಸತೀಶ್ ಕುಮಾರ್ ಹೇಳಿದರು.ವಿಶ್ವ ಛಾಯಾಗ್ರಾಹಕರ ದಿನಾಚರಣೆ ಅಂಗವಾಗಿ ಭಾಗಮಂಡಲ ಕಾವೇರಿ ಪದವಿಪೂರ್ವ ಕಾಲೇಜಿನಲ್ಲಿ ಮಡಿಕೇರಿ ತಾಲೂಕು ಮಂಜಿನನಗರಿ ಛಾಯಾ ಗ್ರಾಹಕರ ಸಂಘವು ಕಾಲೇಜಿನ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಚಿತ್ರಕಲಾ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕಾಲೇಜಿನ ಪ್ರಾಂಶುಪಾಲೆ ಜಾನಕಿ ಮಾತನಾಡಿ ಒಂದು ಛಾಯಾಚಿತ್ರವು ಮನುಷ್ಯನ ದುಃಖವನ್ನು ಶಮನ ಮಾಡುವ ಶಕ್ತಿಯನ್ನು ಹೊಂದಿದೆ.