ಮಡಿಕೇರಿ, ಜೂ. 14: ಕೊಡಗು ಜಿಲ್ಲಾ ಭಾರತೀಯ ಜನತಾ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾಗಿ ಶಾಂತೆಯಂಡ ರವಿ ಕುಶಾಲಪ್ಪ ಹಾಗೂ ಬಾಲಚಂದ್ರ ಕಳಗಿ ಅವರುಗಳನ್ನು ನೇಮಕ ಮಾಡಲಾಗಿದೆ.

ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿ ಕುಶಾಲಪ್ಪ ಹಾಗೂ ಯುವಮೋರ್ಚಾ ಮುಖಂಡ, ಸಂಪಾಜೆ ಗ್ರಾ.ಪಂ. ಅಧ್ಯಕ್ಷರಾಗಿರುವ ಬಾಲಚಂದ್ರ ಕಳಗಿ ಅವರುಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ನೇಮಕಾತಿ ಮಾಡಿ ಆದೇಶ ಹೊರಡಿಸಿದ್ದಾರೆ.