ಹೆಬ್ಬಾಲೆ, ಜೂ. 14: ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಯುವ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಹೆಬ್ಬಾಲೆ ಗ್ರಾಮದ ಹೆಚ್.ಬಿ. ದಿನೇಶಾಚಾರಿ ಆಯ್ಕೆ ಮಾಡಿದ್ದಾರೆ.

ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಗಣ್ಯ ವ್ಯಕ್ತಿಗಳ ಭಾವಚಿತ್ರ ಹಾಗೂ ವೆಬ್‍ಸೈಟ್ ಅನಾವರಣ ಮತ್ತು ಪದವಿ ಸ್ವೀಕಾರ ಸಮಾರಂಭದಲ್ಲಿ ವಿಶ್ವಕರ್ಮ ಸಮಾಜದ ರಾಜ್ಯಾಧ್ಯಕ್ಷ ಉಮೇಶ್ ಅವರು ಆಯ್ಕೆ ಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಸ್ತುತ ಹೆಚ್.ಬಿ. ದಿನೇಶಾಚಾರಿ ತಾಲೂಕು ಚುಟುಕು ಸಾಹಿತ್ಯ ಪರಿಷತ್‍ನ ಅಧ್ಯಕ್ಷರಾಗಿ ಹಾಗೂ ಕನ್ನಡ ಸಾಹಿತ್ಯ ಪರಿಷತ್‍ನ ಕುಶಾಲನಗರ ಘಟಕದ ಸಹ ಕಾರ್ಯದರ್ಶಿಯಾಗಿದ್ದಾರೆ.

ಸಮಾರಂಭದಲ್ಲಿ ಬೆಂಗಳೂರು ನಗರ ಪಾಲಿಕೆ ಸದಸ್ಯೆ ಹೇಮಲತಾ ಸತೀಶ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ನಿರ್ದೇಶಕ ಬಿ.ಎಂ. ವಿಜಯ್ ಶಂಕರ್, ವಿಶ್ವಕರ್ಮ ಸಮಾಜದ ಯುವ ಘಟಕದ ರಾಜ್ಯಾಧ್ಯಕ್ಷ ಮಧುಸೂದನ್, ರಾಜ್ಯ ನಿರ್ದೇಶಕ ವಿ. ಕುಮಾರ್ ಹಾಗೂ ಇನ್ನಿತರರು ಇದ್ದರು.