ನಾಪೆÇೀಕ್ಲು, ಜೂ. 12: ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾ. 13 ರಂದು (ಇಂದು) ಉಚಿತ ಕಣ್ಣಿನ ಪೆÇರೆ ಚಿಕಿತ್ಸಾ ಶಿಬಿರ ನಡೆಯಲಿದೆ.

ರೋಟರಿ ಮಿಸ್ಟಿಹಿಲ್ಸ್ ಫೌಂಡೇಶನ್, ನಾಪೆÇೀಕ್ಲು ಶ್ರೀ ರಾಮಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯ ಇಂಟರ್ಯಾಕ್ಟ್ ಕ್ಲಬ್, ಕೊಡಗು ಜಿಲ್ಲಾ ಅಂಧತ್ವ ನಿಯಂತ್ರಣಾ ಸಂಸ್ಥೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ನಾಪೆÇೀಕ್ಲು ಸಮುದಾಯ ಆರೋಗ್ಯ ಕೇಂದ್ರ, ನಾಪೆÇೀಕ್ಲು ಲಯನ್ಸ್ ಕ್ಲಬ್ ಸಂಯುಕ್ತಾಶ್ರಯದಲ್ಲಿ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಾ. ಪ್ರಶಾಂತ್ ಮತ್ತು ತಂಡದವರಿಂದ ಉಚಿತ ಕಣ್ಣಿನ ಪೆÇರೆ ಶಸ್ತ್ರ ಚಿಕಿತ್ಸಾ ಶಿಬಿರವು ನಡೆಯಲಿದೆ. ಫಲಾನುಭವಿಗಳು ಇದರ ಪ್ರಯೋಜನ ಪಡೆಯುವಂತೆ ಆರೋಗ್ಯ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.