ಸೋಮವಾರಪೇಟೆ, ಜೂ. 1: ಕೇಂದ್ರ ಸರ್ಕಾರಿ ನೌಕರರಿಗೆ ಸರಿಸಮಾನವಾದ ವೇತನ ಮತ್ತು ಭತ್ಯೆಗಳನ್ನು ರಾಜ್ಯ ಸರ್ಕಾರಿ ನೌಕರರಿಗೂ &divound;ೀಡಬೇಕು. ರಾಜ್ಯದಲ್ಲಿ ಕೂಡಲೇ 7ನೇ ವೇತನ ಆಯೋಗ ರಚಿಸಬೇಕು ಎಂಬ ಬೇಡಿಕೆಯನ್ನು ಮುಂದಿಟ್ಟು ಜೂನ್ 2ರಂದು ತಾಲೂಕಿನ ಎಲ್ಲಾ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪ್ರೌಢಶಾಲಾ ಶಿಕ್ಷಕರ ಸಂಘ, ದೈಹಿಕ ಶಿಕ್ಷಣ ಶಿಕ್ಷಕರ ಸಂಘ, ಉಪನ್ಯಾಸಕರ ಸಂಘದ ನೌಕರರು ಒಂದು ದಿನದ ರಜೆ ಹಾಕಿ ಸಾಂಕೇತಿಕ ಪ್ರತಿಭಟನೆ ನಡೆಸಲಿದ್ದಾರೆ ಎಂದು ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಎನ್. ಮಂಜುನಾಥ್ ತಿಳಿಸಿದ್ದಾರೆ.

ನಗರದ ಪತ್ರಿಕಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಸಲು ಉದ್ದೇಶಿಸಿರುವ ಒಂದು ದಿನದ ಸಾಂಕೇತಿಕ ಮುಷ್ಕರಕ್ಕೆ ತಾಲೂಕಿನ ಎಲ್ಲಾ ಶಿಕ್ಷಕರು ಬೆಂಬಲ ಸೂಚಿಸಬೇಕು. ಜೂನ್ 2ರ ಗುರುವಾರ ಇಲ್ಲಿನ ಚೆನ್ನಬಸಪ್ಪ ಸಭಾಂಗಣದಲ್ಲಿ ಶಿಕ್ಷಕ ಸಮುದಾಯದವರು ಹಾಜರಿದ್ದು, ಮುಷ್ಕರಕ್ಕೆ ಪೂರ್ಣ ಬೆಂಬಲ &divound;ೀಡಬೇಕೆಂದು ಮನವಿ ಮಾಡಿದರು.

ಬೇರೆ ರಾಜ್ಯಗಳಲ್ಲಿ 5 ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಇದೆ. ಆದರೆ ಕರ್ನಾಟಕದಲ್ಲಿ 6 ರಿಂದ 7 ವರ್ಷಗಳಾದರೂ ವೇತನ ಪರಿಷ್ಕರಣೆ ಮಾಡಿಲ್ಲ. ಕೇಂದ್ರ ಹಾಗೂ ರಾಜ್ಯ ಸರ್ಕರಿ ನೌಕರರ ನಡುವೆ ಶೇ.113ರಷ್ಟು ವೇತನ ವ್ಯತ್ಯಾಸವಿದ್ದು, ಇದನ್ನು ಸಮವಾಗಿಸಬೇಕು. ತಕ್ಷಣ ರಾಜ್ಯದಲ್ಲಿ 7ನೇ ವೇತನ ಆಯೋಗ ರಚಿಸಬೇಕು ಎಂದು ಆಗ್ರಹಿಸಿದರು.

ಗೋಷ್ಠಿಯಲ್ಲಿ ಜಿಲ್ಲಾ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಪಿಲಿಫ್ ವಾಸ್, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಧರ್ಮಪ್ಪ, ರಾಜ್ಯ ಸಮಿತಿ ಸದಸ್ಯ ನವಾಬ್ ಖಾನ್, ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಪರಮೇಶ್ವರ್, ಶಿಕ್ಷಕರ ಸಂಘದ ವಲಯ ಉಪಾಧ್ಯಕ್ಷ ಸಿ.ಕೆ.ಶಿವಕುಮಾರ್, ಸಂಘದ ಕಾರ್ಯದರ್ಶಿ ಟಿ.ಕೆ.ಬಸವರಾಜು ಉಪಸ್ಥಿತರಿದ್ದರು.