ಮಡಿಕೇರಿ, ಜ. 18: ತಾಲೂಕಿನ ಶಾಲೆಗಳಿಗೆ ಸರಬರಾಜಾಗುವ ಅಕ್ಷರ ದಾಸೋಹದ ವಸ್ತುಗಳನ್ನು ಶಾಲೆಗಳಿಗೆ ತೆರಳಿ ಪರಿಶೀಲನೆ ಮಾಡಿ ಬಂದ ಬಳಿಕ ಕೆಲವರಿಂದ ದೂರವಾಣಿ ಮೂಲಕ ಒತ್ತಡ ಬಂದಿದೆ ಎಂದು ಮಡಿಕೇರಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಎಜಾಜ್ ಪಾಷಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಮಡಿಕೇರಿ ತಾ.ಪಂ. ಸಭಾಂಗಣದಲ್ಲಿ ತಾ.ಪಂ. ಅಧ್ಯಕ್ಷೆ ತೆಕ್ಕಡೆ ಶೋಭಾ ಅವರ ಅಧ್ಯಕ್ಷತೆಯಲ್ಲಿ ನಡೆದ ತಾ.ಪಂ. ಕೆ.ಡಿ.ಪಿ. ಸಭೆಯಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳಿಂದ ಈ ಆರೋಪ ಕೇಳಿಬಂದಿತು.
ಸಭೆಯಲ್ಲಿ ತಾಲೂಕಿನ ಶಾಲೆಗಳ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು. ಈ ಸಂದರ್ಭ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಅಕ್ಷರದಾಸೋಹದ ಅಧಿಕಾರಿಗಳನ್ನು ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಅಕ್ಷರ ದಾಸೋಹ ಮೂಲಕ ಶಾಲೆಗಳಲ್ಲಿ ಬಿಸಿಯೂಟದ ಯೋಜನೆ ಹಾಗೂ ಆಹಾರ ಪದಾರ್ಥಗಳನ್ನು ಪರಿಶೀಲನೆ ಮಾಡಿದ್ದೀರ ಎಂದು ಪ್ರಶ್ನಿಸುತ್ತಾರೆ. ಈ ಸಂದರ್ಭ ಅಧಿಕಾರಿಗಳು ನೀಡಿದ ಅಸಮರ್ಪಕ ಉತ್ತರದಿಂದ ಅಸಮಾ ಧಾನ ವ್ಯಕ್ತಪಡಿಸಿದ ಕಾರ್ಯನಿರ್ವ ಹಣಾಧಿಕಾರಿಗಳು ನಾನು ಕೆಲವು ಶಾಲೆಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದೇನೆ.