ನ್ಯಾಯಾಧೀಶ ನಟರಾಜ್

ಕುಶಾಲನಗರ, ಜು. 2: ಅತ್ಯಾಚಾರ, ಕೊಲೆ ಮತ್ತಿತರ ಗಂಭೀರ ಪ್ರಕರಣಗಳಲ್ಲಿ ಬಾಲಾಪರಾಧಿಗಳಿಗೂ ವಯಸ್ಕರ ಕಾನೂನು ಅನ್ವಯ ವಾಗುತ್ತದೆ ಎಂದು ಕುಶಾಲನಗರ ಜೆಎಂಎಫ್‍ಸಿ ಹಾಗೂ ಸಿವಿಲ್ ನ್ಯಾಯಾಧೀಶ ನಟರಾಜ್ ತಿಳಿಸಿದ್ದಾರೆ.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಡಿಕೇರಿ, ವಕೀಲರ ಸಂಘ ಕೊಡಗು, ಗ್ರಾಮೀಣಾಭಿವೃದ್ಧಿ ಸಂಸ್ಥೆ, ಮಕ್ಕಳ ಸಹಾಯವಾಣಿ, ಪಟ್ಟಣ ಪಂಚಾಯಿತಿ ಕುಶಾಲನಗರ, ಜಿಲ್ಲಾ ಮಕ್ಕಳ ರಕ್ಚಣಾ ಘಟಕ ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಡ್ ಕಚೇರಿ ಆವರಣದಲ್ಲಿ ಏರ್ಪಡಿಸಿದ್ದ ಬಾಲ ನ್ಯಾಯ ಕಾಯ್ದೆ ಕುರಿತು ಕಾನೂನು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮೋಹನ್ ಪ್ರಭು, ಮಕ್ಕಳ ಮನೋಧರ್ಮವನ್ನು ಅರ್ಥ ಮಾಡಿಕೊಂಡು ಮಕ್ಕಳ ಶ್ರೇಯೋಭಿವೃದ್ಧಿಗೆ ಶಿಕ್ಷಕರು, ಪೊಲೀಸರು ಮತ್ತು ಪೋಷಕರು ಒತ್ತು ನೀಡಬೇಕು ಎಂದರು.

ಕುಶಾಲನಗರ ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರ ಬಾಬು ಮಾತನಾಡಿದರು. ವಕೀಲರ ಸಂಘದ ಕಾರ್ಯದರ್ಶಿ ಕೆ.ಬಿ. ಮೋಹನ್, ಕೊಡಗು ಗ್ರಾಮೀಣಾಭಿವೃದ್ಧಿ ಸಂಸ್ಥೆ ಮುಖ್ಯಸ್ಥ ರಾಯ್ ಡೇವಿಡ್, ಸ್ಥಳೀಯ ಸಹಾಯಕ ಠಾಣಾಧಿಕಾರಿ ಮಲ್ಲಿಕಾರ್ಜುನ ಉಪಸ್ಥಿತರಿದ್ದರು.