ನಾಪೋಕ್ಲು, ಸೆ. 24: ಐತಿಹಾಸಿಕ ಇತಿಹಾಸವನ್ನು ತಲೆಮಾರಿನ ಇತಿಹಾಸವನ್ನು ಆಸಕ್ತಿಯಿಂದ ಅಧ್ಯಯನ ಮಾಡುವದರಿಂದ ಜ್ಞಾನ ವೃದ್ಧಿಯೊಂದಿಗೆ ಸಂಸ್ಕøತಿಯ ಉಳಿವಿಗೆ ಸಹಕಾರಿಯಾಗಬಲ್ಲದು ಎಂದು ಮಡಿಕೇರಿ ಎಫ್.ಎಂ.ಸಿ. ಕಾಲೇಜಿನ ಇತಿಹಾಸ ಪ್ರಾಧ್ಯಾಪಕ ಡಾ. ಕುಮಾರಸ್ವಾಮಿ ಹೇಳಿದರು.

ನಾಪೋಕ್ಲು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕøತಿಕ ಮತ್ತು ಕ್ರೀಡಾ ವೇದಿಕೆ ಹಾಗೂ ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ತಮ್ಮ ಸುತ್ತಮುತ್ತಲಿನ ಇತಿಹಾಸ ಮತ್ತು ಸಂಸ್ಕøತಿಯನ್ನು ಅಧ್ಯಯನ ಮಾಡಿ ಹೊರ ಜಗತ್ತಿಗೆ ಪರಿಚಯಿಸುವ ಕೆಲಸ ಮಾಡಬೇಕು ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಜಿಲ್ಲಾ ಪಂಚಾಯಿತಿ ಸದಸ್ಯ ಪಾಡಿಯಮ್ಮಂಡ ಮುರಳೀಧರ ಮಾತನಾಡಿ, ವಿದ್ಯಾರ್ಥಿಗಳು ದುಶ್ಚಟಗಳಿಗೆ ದಾಸರಾಗದೆ ಶಿಸ್ತುಬದ್ಧ ಶಿಕ್ಷಣದೊಂದಿಗೆ ಸ್ವಾವಲಂಬಿಗಳಾಗಿ ಸತ್ಪ್ರಜೆಗಳಾಗಬೇಕು ಎಂದರು. ಕೊಡವ ಸಮಾಜ ಕ್ರೀಡಾ ಮತ್ತು ಸಾಂಸ್ಕøತಿಕ ಮನೋರಂಜನಾ ಕೂಟದ ಮಂಡೀರ ರಾಜಪ್ಪ ಚೆಂಗಪ್ಪ ಹಾಗೂ ವಿದ್ಯಾರ್ಥಿ ನಾಯಕರು ಉಪಸ್ಥಿತರಿದ್ದರು. ಕಾಲೇಜಿನ ಪ್ರಾಂಶುಪಾಲ ಸತೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪ್ರಾಧ್ಯಾಪಕಿ ಕನ್ನಿಕಾ ಡಿ. ಸ್ವಾಗತಿಸಿ, ಪ್ರಾಧ್ಯಾಪಕಿ ಡಾ. ಕಾವೇರಿ ಪ್ರಕಾಶ್ ವಿದ್ಯಾರ್ಥಿ ನಾಯಕರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.