ಸೋಮವಾರಪೇಟೆ, ನ. 21: ಮಾಜಿ ಪ್ರಧಾನಿ ದಿವಂಗತ ಇಂದಿರಾಗಾಂಧಿಯವರ ಹುಟ್ಟುಹಬ್ಬದ ಅಂಗವಾಗಿ ಇಲ್ಲಿನ ಇಂದಿರಾಗಾಂಧಿ ಅಭಿಮಾನಿಗಳ ಸಂಘದ ವತಿಯಿಂದ ಬಸ್ಸ್ ನಿಲ್ದಾಣದ ಪುಟ್ಟಪ್ಪ ವೃತ್ತದಲ್ಲಿ ಇಂದಿರಾಗಾಂಧಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು.

ಸಂಘದ ಅಧ್ಯಕ್ಷರಾದ ಎಚ್.ಎ. ನಾಗರಾಜು ಅವರು ಇಂದಿರಾಗಾಂಧಿ ಯವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಪೂಜೆ ಸಲ್ಲಿಸಿದರು.

ನಂತರ ಪಟ್ಟಣ ಪಂಚಾಯಿತಿಯ ಪೌರ ಕಾರ್ಮಿಕರಿಗೆ ಹಣ್ಣು ಹಂಪಲು ವಿತರಿಸಲಾಯಿತು. ಈ ಸಂದರ್ಭ ಸಂಘದ ಕಾರ್ಯದರ್ಶಿ ಎಚ್.ಓ. ಪ್ರಕಾಶ್, ಪದಾಧಿಕಾರಿಗಳಾದ ಎಚ್.ಎ. ಪಳನಿಸ್ವಾಮಿ, ಎಚ್.ಜಿ. ರಘು, ವಾಸು, ವಿಜಯ, ಮಂಜು, ಕುಮಾರ, ಎಚ್.ಎಂ. ಶಿವಕುಮಾರ್, ಚೆನ್ನಯ್ಯ ಮತ್ತಿತರರು ಉಪಸ್ಥಿತರಿದ್ದರು.