ಮಡಿಕೇರಿ, ಆ. 4: ಭತ್ತದ ಕೃಷಿ ಲಾಭದಾಯಕವಲ್ಲ ಎನ್ನುವ ಮನೋಭಾವದಿಂದ ಕೃಷಿ ಪ್ರಧಾನವಾದ ಕೊಡಗು ಜಿಲ್ಲೆಯಲ್ಲಿ ಭತ್ತದ ಕೃಷಿ ಬಗ್ಗೆ ನಿರಾಸಕ್ತಿ ಹೆಚ್ಚಾಗುತ್ತಿದೆ. ಭತ್ತದ ಕೃಷಿ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಕೆಸರು ಗದ್ದೆ ಕ್ರೀಡೋತ್ಸವ ಹಾಗೂ ಸಾಂಪ್ರದಾಯಿಕ ನಾಟಿ ಓಟದ ಸ್ಪರ್ಧೆಯನ್ನು ಆಯೋಜಿಸಿರುವದಾಗಿ ಅಕಾಡೆಮಿ ಅಧ್ಯಕ್ಷ ಕೊಲ್ಯದ ಗಿರೀಶ್ ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತ ನಾಡಿದ ಅವರು, ಶ್ರೀ ಗೋಪಾಲಕೃಷ್ಣ ಯುವ ಸಂಘ ಮತ್ತು ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ತಾ. 7 ರಂದು ಅವಂದೂರು ಗ್ರಾಮದ ಕಾಳೇರಮ್ಮನ ಅಯ್ಯಣ್ಣನವರ ಗದ್ದೆಯಲ್ಲಿ ಕ್ರೀಡೋತ್ಸವ ನಡೆಯಲಿದೆ ಎಂದರು.
ಅಂದು ಬೆಳಿಗ್ಗೆ 10 ಗಂಟೆಗೆ ತಮ್ಮ ಅಧ್ಯಕ್ಷತೆಯಲ್ಲಿ ನಡೆಯುವ ಕ್ರೀಡೋತ್ಸವವನ್ನು ಮದೆ ಗ್ರಾ.ಪಂ. ಅಧ್ಯಕ್ಷ ಮುದ್ಯನ ಚಂದ್ರಶೇಖರ್ ಉದ್ಘಾಟಿಸಲಿದ್ದಾರೆ. ಸಂಜೆ ನಡೆಯುವ ಸಾಂಪ್ರದಾಯಿಕ ನಾಟಿ ಓಟದ ಸ್ಪರ್ಧೆ ಮತ್ತು ಸಮಾರೋಪ ಸಮಾರಂಭವನ್ನು ಶಾಸಕ ಕೆ.ಜಿ. ಬೋಪಯ್ಯ ಉದ್ಘಾಟಿಸಲಿದ್ದಾರೆ. ನಾಟಿ ಓಟಕ್ಕೆ ಜಿಲ್ಲಾಧಿಕಾರಿ ಡಾ. ರಿಚರ್ಡ್ ವಿನ್ಸೆಂಟ್ ಡಿಸೋಜ ಚಾಲನೆ ನೀಡಲಿದ್ದಾರೆ. ವಿಶೇಷ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಮುಖ್ಯ ಅತಿಥಿಗಳಾಗಿ ತಾ.ಪಂ. ಸದಸ್ಯ ಕೊಡಪಾಲ ಗಣಪತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಎಲ್.ಎನ್. ಕುಳ್ಳಯ್ಯ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಚೊಕ್ಕಾಡಿ ಅಪ್ಪಯ್ಯ, ಕೊಡಗು ಗೌಡ ಸಮಾಜದ ನಿರ್ದೇಶಕ ಕಾಳೇರಮ್ಮನ ಪಾಲಾಕ್ಷ, ಗೋಪಾಲ ಕೃಷ್ಣ ಯುವ ಸಂಘ ಮತ್ತು ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಹೊಸೂರು ಗಿರಿ ಹಾಗೂ ಹಿರಿಯ ಭತ್ತದ ಬೆಳೆಗಾರ ದೇವಾಯಿರ ದೇವಯ್ಯ ಪಾಲ್ಗೊಳ್ಳಲಿದ್ದಾರೆ ಎಂದು ಕೊಲ್ಯದ ಗಿರೀಶ್ ಮಾಹಿತಿ ನೀಡಿದರು. ಸಂಜೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಆಟೋಟಗಳು
ವಿವಿಧ ವಿಭಾಗಗಳಲ್ಲಿ ಕೆಸರು ಗದ್ದೆ ಓಟ, ಪುರುಷರಿಗಾಗಿ ಎತ್ತುಗಳಲ್ಲಿ ಗದ್ದೆ ಹೂಳುವದು, ನಾಟಿ ನೆಡುವದು, ಅಡಿಕೆ ಹಾಳೆÉಗಳಲ್ಲಿ ಮಕ್ಕಳನ್ನು ಎಳೆಯುವದು, ಅಂಬುಗಾಯಿ, ವಾಲಿಬಾಲ್ ಹಾಗೂ ವಿಶೇಷವಾಗಿ ಕೆಸರು ಗದ್ದೆಯಲ್ಲಿ ಪತ್ನಿಯನ್ನು ಎತ್ತಿಕೊಂಡು ಪತಿ ಓಡುವ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
ಮಹಿಳೆಯರಿಗಾಗಿ ಅಗೆ ತೆಗೆಯುವದು ಮತ್ತು ಥ್ರೋಬಾಲ್ ಆಟಗಳು ಮಹಿಳೆಯರು ಹಾಗೂ ಪುರುಷರಿಗಾಗಿ ಹಗ್ಗ ಜಗ್ಗಾಟದ ಸ್ಪರ್ಧೆ ನಡೆಯಲಿದೆ. ಇದರೊಂದಿಗೆ ಮಕ್ಕಳಿಗಾಗಿ ವೈವಿಧ್ಯಮಯ ಆಟದ ಸ್ಪರ್ಧೆಯನ್ನು ಕೂಡ ಆಯೋಜಿಸಲಾಗಿದೆ ಎಂದು ಕೊಲ್ಯದ ಗಿರೀಶ್ ತಿಳಿಸಿದರು.
ಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಚಾಲಕ ಮಂದ್ರೀರ ಮೋಹನ್ ದಾಸ್, ಅಕಾಡೆಮಿ ಸದಸ್ಯರಾದ ಕುಡೆಕಲ್ ಸಂತೋಷ್ ಹಾಗೂ ಗೋಪಾಲಕೃಷ್ಣ ಯುವ ಸಂಘ ಮತ್ತು ಚಾರಿಟೇಬಲ್ ಟ್ರಸ್ಟ್ನ ಅಧ್ಯಕ್ಷ ಹೊಸೂರು ಗಿರಿ ಹಾಜರಿದ್ದರು.