ಮಡಿಕೇರಿ, ಡಿ. 30 : ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ 2016 ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯು 2016ನೇ ಸಾಲಿನ ‘ಗೌರವ ಪ್ರಶಸ್ತಿ’ ಆಯ್ಕೆಗೆ ಅರ್ಜಿ ಆಹ್ವಾನಿಸಿದ್ದು, ಅರೆ ಭಾಷೆ, ಸಾಹಿತ್ಯ, ಕಲೆ, ಸಂಸ್ಕøತಿ, ಜಾನಪದ ಮತ್ತು ಅಧ್ಯಯನ ಮುಂತಾದ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮೂವರಿಗೆ 2016 ನೇ ಸಾಲಿನ ‘ಗೌರವ ಪ್ರಶಸ್ತಿ’ ನೀಡಿ ಗೌರವಿಸಲಾಗುವದು. ಅರ್ಜಿಗಳನ್ನು ಸಾಧಕರು ಸಲ್ಲಿಸಬಹುದು ಅಥವಾ ಸಾಧಕರ ಅಭಿಮಾನಿಗಳು ಶಿಫಾರಸ್ಸುಮಾಡಬಹುದು. ಪ್ರಶಸ್ತಿಗೆ ಅರ್ಹರಾಗಿರುವವರ ಕುರಿತಾಗಿ ಹೆಚ್ಚಿನ ಅಥವಾ ವಿಶೇಷ ಮಾಹಿತಿಗಳಿದ್ದಲ್ಲಿ ಅಕಾಡೆಮಿಗೆ ಒದಗಿಸಬಹುದು. ಹೊಸದಾಗಿ ಅರ್ಜಿ ಸಲ್ಲಿಸುವವರುವ್ಯಕ್ತಿ ಪರಿಚಯದ ಜೊತೆ ಎಲ್ಲಾ ಮಾಹಿತಿಗಳನ್ನು ಅಕಾಡೆಮಿಯ ನಿಗದಿತ ಅರ್ಜಿ ನಮೂನೆಯಲ್ಲಿಯೇ ಕಳುಹಿಸಬೇಕು. ಇದಕ್ಕೆ ಸಂಬಂಧಿಸಿದ ನಿಗದಿತ ಅರ್ಜಿ ನಮೂನೆಯನ್ನು ಅಕಾಡೆಮಿಯ ಕಚೇರಿಯಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ಇತ್ತೀಚಿನ ಭಾವಚಿತ್ರ ಹಾಗೂ ದಾಖಲೆಗಳ ಪ್ರತಿಯೊಂದಿಗೆ ಕೊನೆ ದಿನಾಂಕದ ಮೊದಲು ತಲಪುವಂತೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದು.
2016ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಲೇಖಕರು ಅಥವಾ ಪ್ರಕಾಶಕರು ಅರ್ಜಿ ಸಲ್ಲಿಸಬಹುದಾಗಿದೆ. ದಿನಾಂಕ 01-01-2016 ರಿಂದ 31.12.2016 ರ ಅವಧಿಯ ಮಧ್ಯೆ ಪ್ರಕಟಗೊಂಡ ಪುಸ್ತಕಗಳನ್ನು 2016ನೇ ಸಾಲಿನ ಪುಸ್ತಕ ಬಹುಮಾನ ಯೋಜನೆಗೆ ಪರಿಗಣಿಸಲು ಅವಕಾಶವಿರುತ್ತದೆ. ಹಿಂದಿನ ವರ್ಷಗಳಲ್ಲಿ ಒಮ್ಮೆ ಪುಸ್ತಕ ಬಹುಮಾನ ಪಡೆದ ಲೇಖಕರ ಕೃತಿಗಳನ್ನು ಮುಂದಿನ ಮೂರು ವರ್ಷಗಳಿಗೆ ಪರಿಗಣಿಸಲಾಗುವದಿಲ್ಲ. ಪುಸ್ತಕ ಬಹುಮಾನ ಯೋಜನೆಯಡಿ, ಹೆಚ್ಚು ಸ್ವೀಕರಿಸುವ ಪುಸ್ತಕದ ಮೂರು ಪ್ರಕಾರಗಳನ್ನು ಬಹುಮಾನಕ್ಕೆ ಪರಿಗಣಿಸಲಾಗುವದು. ಪುಸ್ತಕಗಳ ತಲಾ ನಾಲ್ಕು ಪ್ರತಿಗಳನ್ನು ಅರ್ಜಿಯೊಂದಿಗೆ ಸಲ್ಲಿಸತಕ್ಕದ್ದು.
ಇತರ ಭಾಷೆಯಿಂದ ಅರೆಭಾಷೆಗೆ ಅನುವಾದಗೊಂಡ ಭಾಷಾಂತರ/ಅನುವಾದ ಕೃತಿಗಳು, ಅರೆಭಾಷೆ ಕವನ ಸಂಕಲನ, ಅರೆಭಾಷೆ ಕಥಾ ಸಂಕಲನ, ಅರೆಭಾಷೆ ಕಾದಂಬರಿ, ಅರೆಭಾಷೆ ನಾಟಕ ಪ್ರ್ರಾಕಾರಗಳ ಪುಸ್ತಕಗಳನ್ನು ಆಹ್ವಾನಿಸಲಾಗಿದೆ.
ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ “ಗೌರವ ಪ್ರಶಸ್ತಿ-2016 ಯೋಜನೆ” ಹಾಗೂ ಪುಸ್ತಕ ಬಹುಮಾನಕ್ಕೆ ಅರ್ಜಿ ಸಲ್ಲಿಸುವವರು ಮೇಲೆ ನಮೂದಿಸಲಾದ ಪ್ರಕಾರಗಳಲ್ಲಿ 2016 ರಲ್ಲಿ ಪ್ರಕಟವಾದ ಪುಸ್ತಕಗಳ ನಾಲ್ಕು ಪ್ರತಿಗಳನ್ನು ಲಕೋಟೆಯ ಮೇಲೆ “ಪುಸ್ತಕ ಬಹುಮಾನ ಯೋಜನೆ 2016” ಎಂದು ಬರೆದು, ಅರ್ಜಿ ವಿವರಗಳನ್ನು ಅಧ್ಯಕ್ಷರು, ರಿಜಿಸ್ಟ್ರಾರ್, ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ, ಕಾಫಿ-ಕೃಪ ಕಟ್ಟಡ, 1ನೇ ಮಹಡಿ, ರಾಜಾಸೀಟ್ ರಸ್ತೆ, ಮಡಿಕೇರಿ-571 201. ಈ ವಿಳಾಸಕ್ಕೆ ಕಳುಹಿಸಿ ಕೊಡುವದು. ಅರ್ಜಿ ಸಲ್ಲಿಸಲು 2017ರ ಜನವರಿ, 31 ಕೊನೆಯ ದಿನವಾಗಿದೆ. ಹೆಚ್ಚಿನ ವಿವರಕ್ಕೆ ಅಕಾಡೆಮಿಯನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಕೊಲ್ಯದ ಗಿರೀಶ್ ತಿಳಿಸಿದ್ದಾರೆ.