ಮಡಿಕೇರಿ, ಜು.5: ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಉದ್ಯೋಗಿನಿ ಯೋಜನೆಯಡಿ ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ ಆಧಾರಿತ ಉಪ ಕಸುಬು ಹಾಗೂ ಕೃಷಿಯೇತರ ಚಟುವಟಿಕೆಗಳ ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು 18 ರಿಂದ 45 ವರ್ಷದ ಒಳಗಿನ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿಶೇಷ ವರ್ಗದ ಮಹಿಳೆಯರಿಗೆ 10 ಸಾವಿರ ಹಾಗೂ ಸಾಮಾನ್ಯ ವರ್ಗದ ಮಹಿಳೆಯರಿಗೆ ರೂ. 7 ಸಾವಿರ ಸಹಾಯಧನ ನೀಡಲಾಗುವದು. ಉದ್ಯೋಗಿನಿ ಯೋಜನೆಯ ಅರ್ಜಿಗಳನ್ನು ಶಿಶು ಅಭಿವೃದ್ಧಿ ಯೋಜನಾ ಕಚೇರಿಯಲ್ಲಿ ಪಡೆದು ಸೂಕ್ತ ದಾಖಲಾತಿಗಳೊಂದಿಗೆ ಆಗಸ್ಟ್, 14 ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ:08272-220087ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.