ಮಡಿಕೇರಿ, ಡಿ. 1: ಅಶ್ವಿನಿ ಆಸ್ಪತ್ರೆ ವತಿಯಿಂದ ತಾ. 5 ರವರೆಗೆ ಸಾರ್ವಜನಿಕರಿಗೆ ನೇತ್ರ ಶಸ್ತ್ರ ಚಿಕಿತ್ಸಾ ಉಚಿತ ಶಿಬಿರ ನಡೆಯಲಿದೆ. ತಾ. 2 ರಂದು (ಇಂದು) ಮಧ್ಯಾಹ್ನ 1.30 ಗಂಟೆಗೆ ನೇತ್ರ ಶಸ್ತ್ರ ಚಿಕಿತ್ಸಾ ಉಚಿತ ಶಿಬಿರದ ಉದ್ಘಾಟನಾ ಸಮಾರಂಭ ನಡೆಯಲಿದೆ. ಮಧ್ಯಾಹ್ನ 1.30 ರಿಂದ 1.45 ರವರೆಗೆ ಶಿಬಿರಾರ್ಥಿಗಳೊಂದಿಗೆ ಸಂವಾದ, ನಂತರ ಅಶ್ವಿನಿ ಕುಮಾರ ದೇವರಿಗೆ ಮಂಗಳಾರತಿ-ಸರ್ವ ಧರ್ಮ ಪ್ರಾರ್ಥನೆ ಮತ್ತು ದೀಪ ಪ್ರಜ್ವಲನೆ ಮುಖಾಂತರ ಶಿಬಿರಕ್ಕೆ ಚಾಲನೆ. ಮಧ್ಯಾಹ್ನ 2 ಗಂಟೆಯಿಂದ ಸಂವಾದ ನಡೆಯಲಿದೆ ಎಂದು ಶ್ರೀ ಕಾವೇರಿ ಕೃಪಾ ಕಲ್ಯಾಣ ಸೇವಾ ಸಮಿತಿ ಅಧ್ಯಕ್ಷರು ತಿಳಿಸಿದ್ದಾರೆ.

30ನೇ ನೇತ್ರ ಶಸ್ತ್ರ ಚಿಕಿತ್ಸಾ ಉಚಿತ ಶಿಬಿರದ ಸಮಾರೋಪ ಸಮಾರಂಭವು ತಾ. 4 ರಂದು ಸಂಜೆ 5.30 ಗಂಟೆಗೆ ಅಶ್ವಿನಿ ಆಸ್ಪತ್ರೆಯಲ್ಲಿ ನಡೆಯಲಿದೆ. ಶ್ರೀ ಕಾವೇರಿ ಕೃಪಾ ವಿಶ್ವ ಕಲ್ಯಾಣ ಸೇವಾ ಸಮಿತಿಯ ಅಧ್ಯಕ್ಷ ಬಿ.ಕೆ. ಕೃಷ್ಣ, ಶಾಸಕರಾದ ಎಂ.ಪಿ.ಅಪ್ಪಚ್ಚುರಂಜನ್, ಕೆ.ಜಿ.ಬೋಪಯ್ಯ, ಎಂ.ಪಿ.ಸುನಿಲ್ ಸುಬ್ರಮಣಿ, ಶಾಂತೆಯಂಡ ವೀಣಾಅಚ್ಚಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಓ.ಆರ್. ಶ್ರೀರಂಗಪ್ಪ, ರೋಟರಿ ಕ್ಲಬ್ ಅಧ್ಯಕ್ಷರು ಹಾಗೂ ಐಎಂಎ ಅಧ್ಯಕ್ಷರಾದ ಮೋಹನ್ ಅಪ್ಪಾಜಿ ಇತರರು ಪಾಲ್ಗೊಳ್ಳಲಿದ್ದಾರೆ.