ನಾಪೋಕ್ಲು, ಡಿ. 24: ಪೆರಾಜೆ ಶ್ರೀ ಶಾಸ್ತಾವು ದೇವಸ್ಥಾನದಲ್ಲಿ ನವೀಕರಣ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವವು ಜ. 25 ರಿಂದ ಫೆ. 3 ರವರೆಗೆ ನಡೆಯಲಿದ್ದು, ಈ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ದೇವಸ್ಥಾನದ ಸಭಾ ಭವನದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ನವೀಕರಣ ಬ್ರಹ್ಮಕಲಶೋತ್ಸವ ಸಮಿತಿ ಅಧ್ಯಕ್ಷ ಆರ್.ಡಿ. ಆನಂದ ವಹಿಸಿದ್ದರು. ಆಮಂತ್ರಣ ಪತ್ರಿಕೆಯನ್ನು ಗೌರವಾಧ್ಯಕ್ಷ ಡಾ. ಕೆ.ವಿ ಚಿದಾನಂದ ಬಿಡುಗಡೆಗೊಳಿಸಿದರು. ವೇದಿಕೆಯಲ್ಲಿ ದೇವಳದ ಪೋಷಕ ಹಾಗೂ ವೀರಾಜಪೇಟೆ ಶಾಸಕ ಕೆ.ಜಿ. ಬೋಪಯ್ಯ, ದೇವತಕ್ಕರಾದ ರಾಜಗೋಪಾಲ್ ರಾಮಕಜೆ, ಗ್ರಾ.ಪಂ. ಅಧ್ಯಕ್ಷೆ ಜಯಲಕ್ಷ್ಮೀ, ಆರ್ಥಿಕ ಸಮಿತಿ ಅಧ್ಯಕ್ಷ ಡಾ. ಎನ್.ಎ. ಜ್ಞಾನೇಶ್, ಆರ್ಥಿಕ ಸಮಿತಿ ಕಾರ್ಯದರ್ಶಿ ತೇಜಪ್ರಸಾದ್ ಎ.ಎಸ್. ಸಂಪಾಜೆ, ಪಯಸ್ವಿನಿ ಕೃ.ಪ.ಸ. ಸಂಘದ ಅಧ್ಯಕ್ಷ ಬಾಲಚಂದ್ರ ಕಳಗಿ, ತೊಡಿಕಾನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪಿ.ಬಿ. ದಿವಾಕರ ರೈ, ಆಡಳಿತ ಸಮಿತಿ ಕಾರ್ಯದರ್ಶಿ ವಿಶ್ವನಾಥ ಕುಂಬಳಚೇರಿ, ಜೀರ್ಣೋದ್ಧಾರ ಸಮಿತಿ ಕಾರ್ಯದರ್ಶಿ ತಿಲೋತ್ತಮ ಅಡ್ಕ ಉಪಸ್ಥಿತರಿದ್ದರು. ದೇವಸ್ಥಾನದ ಆಡಳಿತ ಮೊಕ್ತೇಸರ ನಾಗೇಶ್ ಕುಂದಲ್ಪಾಡಿ ಸ್ವಾಗತಿಸಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಪ್ರವೀಣ್ ಬಂಗಾರಕೋಡಿ ವಂದಿಸಿದರು. ನವೀಕರಣ ಬ್ರಹ್ಮಕಲಶೋತ್ಸವ ಸಮಿತಿ ಪಧಾನ ಕಾರ್ಯದರ್ಶಿ ಎನ್.ಎ. ಜಿತೇಂದ್ರ ನಿಡ್ಯಮಲೆ ಕಾರ್ಯಕ್ರಮ ನಿರೂಪಿಸಿದರು.