ಮಡಿಕೇರಿ, ಜು. 8: ಕಲೆ, ಸಾಂಸ್ಕøತಿಕ, ಯಾವದೇ ಕ್ಷೇತ್ರದಲ್ಲಿ ನಾವೀನ್ಯತೆ, ರಾಷ್ಟ್ರೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜ ಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆ ಸಮಿತಿಯ ನಿರ್ಧಾರದ ಪ್ರಕಾರ ಮಾನ್ಯತೆಗೆ ಯೋಗ್ಯವಾದ ಯಾವದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವಂತಹ ಮಕ್ಕಳಿಗೆ 9 ರಿಂದ 16 ವರ್ಷದೊಳಗಿನ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಪ್ರಸ್ತಾವನೆಗಳನ್ನು ಹೊರಡಿಸಲಾಗಿತ್ತು. ಆದರೆ ಸರ್ಕಾರವು ವಯೋಮಿತಿ ಯನ್ನು ಪರಿಷ್ಕರಿಸಿ 5 ರಿಂದ 18 ವರ್ಷದೊಳಗಿನ ಅಂದರೆ ದಿನಾಂಕ 01-08-1998 ಹಾಗೂ ನಂತರ ಹುಟ್ಟಿದ ಮಕ್ಕಳನ್ನು 2016ನೇ ಸಾಲಿಗೆ ಆಯ್ಕೆ ಮಾಡಲು ನಿರ್ಧರಿಸಿದೆ.

ರಾಷ್ಟ್ರ ಪ್ರಶಸ್ತಿಗಾಗಿ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರ ಕಚೇರಿ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಡಗು ಜಿಲ್ಲೆ ಇಲ್ಲಿಂದ ಪಡೆದು ಆಂಗ್ಲ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ತಾ. 20 ರೊಳಗೆ ತಲುಪುವಂತೆ ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುದರ್ಶನ ಅತಿಥಿಗೃಹದ ಹಿಂಭಾಗ, ಚೈನ್‍ಗೇಟ್, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ, ದೂ.ಸಂ 08272-228010 ಈ ಕಚೇರಿಗೆ ಸಲ್ಲಿಸತಕ್ಕದ್ದು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವದೇ ಕಾರಣಕ್ಕೂ ಪರಿಗಣಿಸಲಾಗುವದಿಲ್ಲ ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.