ಮಡಿಕೇರಿ, ಡಿ. 19: ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಆಗುತ್ತಿರುವ ಸಮಸ್ಯೆಗಳು ಹಾಗೂ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲು ತಾ. 20 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಪೊನ್ನಂಪೇಟೆ ಪ್ರವಾಸಿ ಮಂದಿರದಲ್ಲಿ ಹಾಗೂ ತಾ. 22 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಶ್ರೀಮಂಗಲ ಪ್ರವಾಸಿ ಮಂದಿರದಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಮಡಿಕೇರಿ ಪೊಲೀಸ್ ಠಾಣಾ ವತಿಯಿಂದ ಅಹವಾಲು ಸ್ವೀಕಾರ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ಮಾಹಿತಿಗೆ ಭ್ರಷ್ಟಾಚಾರ ನಿಗ್ರಹ ದಳ, ಪೊಲೀಸ್ ಠಾಣೆ, ಶಾಂತಿ ನಿಲಯ, ಕಾನ್ವೆಂಟ್ ಜಂಕ್ಷನ್, ಮಡಿಕೇರಿ-571201, ದೂರವಾಣಿ ಸಂಖ್ಯೆ: 08272-222100, 9480806225 ನ್ನು ಸಂಪರ್ಕಿಸ ಬಹುದು ಎಂದು ಮಡಿಕೇರಿ ಪೊಲೀಸ್ ಠಾಣೆ ಭ್ರಷ್ಟಾಚಾರ ನಿಗ್ರಹದಳ ಠಾಣಾಧಿಕಾರಿ ಹಾಗೂ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.