ಮಡಿಕೇರಿ, ಸೆ. 18: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿಯ ವಿದ್ಯಾರ್ಥಿ ವೇತನ ಮಂಜೂರಾತಿ ಕಾರ್ಯಕ್ರಮಗಳಡಿ ವಿದ್ಯಾರ್ಥಿಗಳ ಆಧಾರ್ ಸಂಖ್ಯೆಯನ್ನು ಕಡ್ಡಾಯವಾಗಿ ಪಡೆಯುವಂತೆ ಸೂಚಿಸಿದ್ದು, ಆದ್ದರಿಂದ ವೀರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ ಬರುವ ವಿವಿಧ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಆಧಾರ್ ಕಾರ್ಡ್ ನೊಂದಾವಣೆ ಮಾಡಿಸದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳನ್ನು ಈ ತಿಂಗಳ ಅಂತ್ಯದೊಳಗೆ ನೊಂದಾವಣೆ ಮಾಡಿಸಿ, ಜಾತಿ ಹಾಗೂ ಆದಾಯದಲ್ಲಿ ಹೊಂದಿರುವ ಪ್ರಮಾಣ ಪತ್ರವನ್ನು ಸಂಬಂಧಿಸಿದ ಶಾಲಾ ಹಾಗೂ ಕಾಲೇಜು ಮುಖ್ಯಸ್ಥರ ಮೂಲಕ ಈ ಕಚೇರಿಗೆ ಸಲ್ಲಿಸುವದು. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್ ಸೈಟ್ ತಿತಿತಿ.sಚಿmಚಿರಿಚಿಞಚಿಟಥಿಚಿಟಿಚಿ.ಞಚಿಡಿ.ಟಿiಛಿ.iಟಿ ನ್ನು ಸಂಪರ್ಕಿಸಬಹುದು ಎಂದು ವೀರಾಜಪೇಟೆ ತಾಲೂಕು ಪೊನ್ನಂಪೇಟೆಯ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.